ಮಂಗಳೂರು ; ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 15 ಮಂದಿಯ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಗಾಯಗೊಂಡ ಕಲಂದರ್ ಶಫಿ ಮಾಹಿತಿ ಅನ್ವಯ ನಿಸಾರ್ ಎಂಬವರ ದೂರಿನನ್ವಯ ರಹೀಂ ಪರಿಚಯಸ್ಥರೇ ಆಗಿರುವ ದೀಪಕ್, ಸುಮಿತ್ ಸೇರಿ 15 ಜನರ ವಿರುದ್ದ ಬಿಎನ್ ಎಸ್ 103, 109, 118(1), 118(2), 190, 191(1), 191(2), 191(3) ನಡಿ ಪ್ರಕರಣ ದಾಖಲಾಗಿದೆ.
ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರು ಹೊಳೆ ಬದಿಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡುತ್ತಿದ್ದ ಸಂದರ್ಭದಲ್ಲಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುತ್ತಿದ್ದರು ಈ ವೇಳೆ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ದಾಳಿ ನಡೆಸಿದ್ದು ಚಾಲಕನ ಸೀಟಿನಲ್ಲಿದ್ದ ಅಬ್ದುಲ್ ರಹಿಮಾನ್ ಅವರನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್ ಗಳೊಂದಿಗೆ ಯದ್ವಾ- ತದ್ಭಾ ದಾಳಿ ನಡೆಸಿದ್ದಾರೆಂದು ತಿಳಿಸಿದ್ದಾರೆ.
ಅಲ್ಲಿದ್ದವರು ಬೊಬ್ಬೆ ಹಾಕಿದ್ದರಿಂದ ಹಲ್ಲೆ ಮಾಡಿದ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪರಾರಿಯಾಗಿದ್ದು ಹಲ್ಲೆಗೈದವರ ಪೈಕಿ ಇಬ್ಬರು ಪರಿಚಯಸ್ಥರು ಎಂದು ಹಲ್ಲೆಗೊಳಗಾಗಿ ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಲಂದರ್ ಶಾಫಿ ಮಾಹಿತಿ ನೀಡಿದ್ದಾರೆ. ಮೃತರನ್ನು ಆಸ್ಪತ್ರೆಗೆ ದಾಖಲಿಸಿದ್ದ ಮುಹಮ್ಮದ್ ನಿಸಾರ್ ಎಂಬವರು ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


