ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರುಕಳಿಸಿದ ನೈತಿಕ ಪೊಲೀಸ್ ಗಿರಿ ಪ್ರಕರಣ . ಅನ್ಯ ಕೋಮಿನ ಜೋಡಿಯ ಮೇಲೆ ಭಜರಂಗದಳದ ಕಾರ್ಯಕರ್ತರಿಂದ ಮಂಗಳೂರಿನ ಕದ್ರಿ ಪಾರ್ಕ್ ಬಳಿ ಹಲ್ಲೆ ನಡೆದ ಘಟನೆ ನಡೆದಿದೆ.
ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಉತ್ತರ ಕರ್ನಾಟಕ ಮೂಲದ ಅನ್ಯಕೋಮಿನ ಜೋಡಿಯ ಮೇಲೆ ಕಾರ್ಯಕರ್ತ ರಿಂದ ಹಲ್ಲೆ ನಡೆದಿದೆ.
ಹಲ್ಲೆ ನಡೆಸಿ ಅನ್ಯಕೋಮಿನ ಜೋಡಿಯನ್ನು ಬಜರಂಗದಳ ಕಾರ್ಯಕರ್ತರು ಕದ್ರಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ವಿಚಾರಣೆ ನಡೆಸಿದ ಪೋಲಿಸರು 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ
ಕದ್ರಿ ಪೋಲಿಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


