ಮಂಗಳೂರು ; ಸಾಮಾಜಿಕ ಮಾಧ್ಯಮದಲ್ಲಿ ಬಸ್ ಕಂಡಕ್ಟರ್ ಕೊಣಾಜೆ ರೂಟ್ ನ ಬಸ್ವಕಂಡಕ್ಟರ್ ಒಬ್ಬ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿರುವ ವೀಡಿಯೊಗೆ ಸಂಬಂಧಿಸಿದಂತೆ, 24/4/2025 ರಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅದರಂತೆ ಸಿಆರ್ ಸಂಖ್ಯೆ 52/25 ಯು/ಎಸ್ 74, 75 ಬಿಎನ್ಎಸ್ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ನಗರ ಪೋಲಿಸ್ ಆಯುಕ್ತರು ತಿಳಿಸಿದ್ದಾರೆ.
ಆರೋಪಿಯ ಹೆಸರು ಪ್ರದೀಪ್ ಕಾಶಪ್ಪ ನಾಯ್ಕರ್ (ಬಸ್ ಕಂಡಕ್ಟರ್ 35 ವರ್ಷ) ಎಂದು ತಿಳಿದಿದ್ದು ಈತ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದನು.ಈತನು ಹೆಣ್ಣುಮಗಳ ಮೇಲೆ ಅಸಭ್ಯ ವರ್ತನೆಯ ಮೂಲಕ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಎಲ್ಲೆಡೆ ಅಕ್ರೋಶ ವ್ಯಕ್ತವಾಗಿದೆ. ಇದೀಗ ಅತನನ್ನು ಪೋಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದಿದೆ…


