Tuesday, July 14, 2026
Homeಜಿಲ್ಲೆಮಂಗಳೂರು : ಬಾಂಗ್ಲಾದೇಶಿ ಅಕ್ರಮ ವಲಸಿಗರಿಗೆ ಕೆಲಸ ಕಲ್ಪಿಸಿದ ಜಾಲ ಬಯಲು ; ಮೂವರ ವಿರುದ್ಧ...

ಮಂಗಳೂರು : ಬಾಂಗ್ಲಾದೇಶಿ ಅಕ್ರಮ ವಲಸಿಗರಿಗೆ ಕೆಲಸ ಕಲ್ಪಿಸಿದ ಜಾಲ ಬಯಲು ; ಮೂವರ ವಿರುದ್ಧ ಪ್ರಕರಣ ದಾಖಲು .

ಮಂಗಳೂರು : ಮಂಗಳೂರಿನಲ್ಲಿ ಬಾಂಗ್ಲಾದೇಶಿ ಅಕ್ರಮ ವಲಸಿಗರಿಗೆ ಕೆಲಸ ಕಲ್ಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮೂಲದ ಮೊಯ್ದಿನ್ ಇಸ್ಲಾಂ, ರಸೂಲ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಮಂಗಳೂರಿಗೆ ಕರೆತರುತ್ತಿದ್ದು, ಅವರೊಂದಿಗೆ ಕೆಲ ಬಾಂಗ್ಲಾದೇಶಿ ಪ್ರಜೆಗಳನ್ನೂ ಅಕ್ರಮವಾಗಿ ಕರೆತಂದು ವಿವಿಧ ನಿರ್ಮಾಣ ಕಾಮಗಾರಿಗಳಲ್ಲಿ ಕೆಲಸಕ್ಕೆ ನಿಯೋಜಿಸಿರುವ ಆರೋಪ ಕೇಳಿಬಂದಿದೆ.

ಈ ಪ್ರಕರಣದಲ್ಲಿ ಮೊಯ್ದಿನ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ಅವರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಇನ್ನೊಬ್ಬ ಆರೋಪಿ ರಸೂಲ್ ಇಸ್ಲಾಂನನ್ನು ಕೋಲ್ಕತ್ತಾ ಪೊಲೀಸರ ಸಹಕಾರದೊಂದಿಗೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಬಂಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರ ಸಮನ್ವಯದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಯನ್ನು ಕರೆತರಲು ಪೊಲೀಸ್ ತಂಡ ಈಗಾಗಲೇ ಕೋಲ್ಕತ್ತಾಗೆ ತೆರಳಿದೆ.

ಆರೋಪಿಯನ್ನು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ ಬಳಿಕ ಈ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

Most Popular