Monday, March 16, 2026
Flats for sale
Homeಜಿಲ್ಲೆಮಂಗಳೂರು : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರ,ಪ್ರಾಥಮಿಕ ಶಾಲೆ,ಪ್ರೌಢ ಶಾಲೆ...

ಮಂಗಳೂರು : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರ,ಪ್ರಾಥಮಿಕ ಶಾಲೆ,ಪ್ರೌಢ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ..!

ಮಂಗಳೂರು : ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 12.06.2025ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರು ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಸಾರ್ವಜನಿಕರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ನನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು 0824 2442590 ಸಂಪರ್ಕಿಸಲು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular