Tuesday, November 10, 2026
Homeಜಿಲ್ಲೆಮಂಗಳೂರು : ಬಿಜೆಪಿ ಕಚೇರಿಯಲ್ಲಿ ದೀಪಾವಳಿ ಸಂಭ್ರಮ – ಲಕ್ಷ್ಮಿ ಪೂಜೆಯೊಂದಿಗೆ ಗೋಪೂಜೆ ಆಚರಣೆ..!

ಮಂಗಳೂರು : ಬಿಜೆಪಿ ಕಚೇರಿಯಲ್ಲಿ ದೀಪಾವಳಿ ಸಂಭ್ರಮ – ಲಕ್ಷ್ಮಿ ಪೂಜೆಯೊಂದಿಗೆ ಗೋಪೂಜೆ ಆಚರಣೆ..!

ಮಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ವಾತಾವರಣ ಮನೆಮಾಡಿತ್ತು. ಹಬ್ಬದ ಅಂಗವಾಗಿ ಲಕ್ಷ್ಮಿ ಪೂಜೆಯ ಜೊತೆಗೆ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಗೋಪೂಜೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.

ಹಿಂದೂ ಧಾರ್ಮಿಕ ಸಂಪ್ರದಾಯದಲ್ಲಿ ಗೋಮಾತೆಗೆ ವಿಶೇಷ ಸ್ಥಾನಮಾನವಿದ್ದು, ಗೋವು ಪೂಜ್ಯನೀಯವಾಗಿದೆ. ಈ ಹಿನ್ನೆಲೆಯಲ್ಲಿ ಗೋಪೂಜೆಯ ಮೂಲಕ ಗೋಮಾತೆಗೆ ಗೌರವ ಸಮರ್ಪಿಸಲಾಯಿತು. ಪೂಜಾ ವಿಧಿವಿಧಾನಗಳ ಬಳಿಕ ಗೋಮಾತೆಗೆ ಆರತಿ ಬೆಳಗಿ, ಹೂವಿನ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಹಿಂದೂ ಧರ್ಮದಲ್ಲಿ ಗೋವಿಗೆ ವಿಶೇಷ ಸ್ಥಾನಮಾನವಿದ್ದು, ಗೋಮಾತೆಯನ್ನು ಪೂಜಿಸುವುದು ನಮ್ಮ ಧಾರ್ಮಿಕ ಸಂಪ್ರದಾಯ ಮತ್ತು ಸಂಸ್ಕೃತಿಯ ಭಾಗವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷರು ಸತೀಶ್ ಕುಂಪಲ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಎಲ್ಲರೂ ಪರಸ್ಪರ ದೀಪಾವಳಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ನಡುವೆ ಬಿಜೆಪಿ ಕಚೇರಿಯಲ್ಲಿ ಧಾರ್ಮಿಕ ಶ್ರದ್ಧೆ ಮತ್ತು ಸಂಪ್ರದಾಯದೊಂದಿಗೆ ಗೋಪೂಜೆ ಹಾಗೂ ಲಕ್ಷ್ಮಿ ಪೂಜೆ ನೆರವೇರಿತು.

RELATED ARTICLES

LEAVE A REPLY

Please enter your comment!
Please enter your name here

Most Popular