ಮಂಗಳೂರು : ಬಿಜೆಪಿ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಿಂದ ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಏಪ್ರಿಲ್ 4ರ ಗುರುವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಬಂಟ್ಸ್ ಹಾಸ್ಟೆಲ್‌ನಲ್ಲಿರುವ ಬಿಜೆಪಿ ಚುನಾವಣಾ ಕಚೇರಿಯಿಂದ ಟೌನ್‌ಹಾಲ್‌ವರೆಗೆ ಕ್ಯಾಪ್ಟನ್ ಚೌಟಾ ಬೆಂಬಲಿಗರು ಮೆರವಣಿಗೆ ನಡೆಸಿದರು. ಕ್ಯಾಪ್ಟನ್ ಚೌಟಾ ಅವರು ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಏಪ್ರಿಲ್ 26 ರಂದು ಚುನಾವಣೆ ನಿಗದಿಯಾಗಿದ್ದು, ಅವರು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ವಿರುದ್ಧ ಸ್ಪರ್ಧಿಸಲಿದ್ದಾರೆ.

ಶಾಸಕರಾದ ವೇದವ್ಯಾಸ್ ಕಾಮತ್, ಡಾ ಭರತ್ ವೈ ಶೆಟ್ಟಿ, ಹರೀಶ್ ಪೂಂಜಾ, ಉಮಾನಾಥ ಕೋಟ್ಯಾನ್, ಮತ್ತು ರಾಜೇಶ್ ನಾಯ್ಕ್, ಮಾಜಿ ಶಾಸಕ ಸಿ ಟಿ ರವಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲ್, ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ಜೆಡಿಎಸ್ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.


