ಮಂಗಳೂರು : ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದ ಬೆನ್ನಲ್ಲೇ ಸೌದಿ ಅರೇಬಿಯಾದಲ್ಲಿ ನಡೆಯಬೇಕಿದ್ದ ದೇವದಾಸ್ ಕಾಪಿಕಾಡ್ ರವರ ಕಾಮಿಡಿ ಶೋಗೆ ಬಹಿಷ್ಕಾರದ ಬೆದರಿಕೆ ಬಂದ ಘಟನೆ ನಡೆದಿದೆ. ಈ ಬೆನ್ನಲ್ಲೇ ಅವರು ಉಲ್ಟಾ ಹೊಡೆಡಿದ್ದು ನಮಗೆ ಎಲ್ಲ ರಾಜಕೀಯ ವ್ಯಕ್ತಿಗಳು ಒಂದೇ,ರಮಾನಾಥ ರೈ,ನಳಿನ್ ಕುಮಾರ್ ಕಟೀಲ್ ಸೇರಿ ಎಲ್ಲ ಪಕ್ಷದ ನಾಯಕರ ಜೊತೆ ಅನ್ನ್ಯೋನತೆಯಿಂದ ಇದ್ದೇವೆ ,ನಾವು ಕಲಾವಿದರು ನಮಗೆ ಪಕ್ಷ ಭೇದಇಲ್ಲವೆಂದು ಸ್ಪಷ್ಟಿಕರಣಕೊಟ್ಟಿದ್ದರು.
ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಅವರು ಆನ್ಲೈನ್ ಸದಸ್ಯತ್ವ ಪಡೆದಿದ್ದರು. ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದ ಬಗ್ಗೆ ಪಕ್ಷದ ಕಡೆಯಿಂದ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಹಾಕಲಾಗಿತ್ತು. ಫೋಸ್ಟ್ ವೈರಲ್ ಬೆನ್ನಲ್ಲೇ ದೇವದಾಸ್ ಕಾಪಿಕಾಡ್ಗೆ ಬಹಿಷ್ಕಾರದ ಬಿಸಿ ತಟ್ಟಿತ್ತು. ಸೆ.13 ಹಾಗೂ 14ರಂದು ಸೌದಿಯ ಜುಬೈಲ್ನ ಪುಲಿ ರೆಸ್ಟೋರೆಂಟ್ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ‘ಬಿಜೆಪಿ ಸದಸ್ಯತ್ವ ಪಡೆದ ಹಿನ್ನೆಲೆ ಕಾರ್ಯಕ್ರಮ ಬಹಿಷ್ಕರಿಸಿ’ ಎಂಬ ಪೋಸ್ಟ್ ವೈರಲ್ ಆಗಿದೆ. ಬಹಿಷ್ಕಾರ ಬೆದರಿಕೆ ಬೆನ್ನಲ್ಲೇ ಕಾಪಿಕಾಡ್ ಉಲ್ಟಾ ಹೊಡೆದಿದ್ದಾರೆ.
ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ. ಸದ್ಯ ಸಾಮಾಜಿಕ ತಾಣಗಳಲ್ಲಿ ಸ್ಪಷ್ಟನೆ ಆಡಿಯೋ ಹರಿಬಿಟ್ಟಿದ್ದಾರೆ. ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ. ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ. ಯಾವುದೇ ಪಕ್ಷಕ್ಕೆ ಸೇರ್ಪಡೆಯೂ ಆಗಿಲ್ಲ. ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ’ ಎಂದು ದೇವದಾಸ್ ಕಾಪಿಕಾಡ್ ಸ್ಪಷ್ಟನೆ ಕೊಟ್ಟಿದ್ದಾರೆ.