Sunday, August 16, 2026
Homeಜಿಲ್ಲೆಮಂಗಳೂರು : ಬಿಲ್ಲವ, ಬಂಟ್ಸ್ ಸಮುದಾಯಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ; ಅನಿತಾ ಕಾಸರಗೋಡು ಬಂಧನ.

ಮಂಗಳೂರು : ಬಿಲ್ಲವ, ಬಂಟ್ಸ್ ಸಮುದಾಯಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ; ಅನಿತಾ ಕಾಸರಗೋಡು ಬಂಧನ.

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಹಾಗೂ ಬಂಟ್ಸ್ ಸಮುದಾಯಗಳ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಡಿ ಅನಿತಾ ಕಾಸರಗೋಡು ಅವರನ್ನು ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.

ಸಮುದಾಯಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಪೋಸ್ಟ್‌ಗಳು ವೈರಲ್ ಆದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದವು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್‌ಗಳ ಪರಿಶೀಲನೆ, ತಾಂತ್ರಿಕ ಮಾಹಿತಿ ಸಂಗ್ರಹ ಸೇರಿದಂತೆ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

Most Popular