Saturday, April 19, 2025
Flats for sale
Homeಜಿಲ್ಲೆಮಂಗಳೂರು ; ಬಿಹಾರ ಮೂಲದ ಯುವತಿಯ ಗ್ಯಾಂಗ್ ರೇಪ್ ಪ್ರಕರಣ ; ಮೂವರ ಬಂಧನ…..!

ಮಂಗಳೂರು ; ಬಿಹಾರ ಮೂಲದ ಯುವತಿಯ ಗ್ಯಾಂಗ್ ರೇಪ್ ಪ್ರಕರಣ ; ಮೂವರ ಬಂಧನ…..!

ಮಂಗಳೂರು ; ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ಬಂದು ಕೇರಳದ ಉಪ್ಪಳದಲ್ಲಿ ವಾಸವಾಗಿದ್ದ ಯುವತಿಯನ್ನು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಏಪ್ರಿಲ್ 16 ರ ರಾತ್ರಿ ಈ ಹೇಯ ಕೃತ್ಯ ನಡೆದಿದ್ದು, ಅಟೋ ಚಾಲಕ ಸೇರಿ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಿಥುನ್ ಕುಂಪಾಲ,ಮನೀಷ್,ಪ್ರಭುರಾಜ್ ಎಂದು ತಿಳಿದುಬಂದಿದೆ.

ಉಪ್ಪಳದಲ್ಲಿ ವಾಸವಾಗಿದ್ದ ಯುವತಿ ಸ್ನೇಹಿತನ ಜೊತೆಯಲ್ಲಿ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದಿದ್ದು, ಇಲ್ಲಿ ಇಬ್ಬರಿಗೂ ಜಗಳವಾಗಿ ಬೇರೆ ಬೇರೆಯಾಗಿದ್ದಾರೆ. ಈ ವೇಳೆ ಜಗಳದಲ್ಲಿ ಯುವತಿಯ ಮೊಬೈಲ್ ಪುಡಿಯಾಗಿದ್ದು ದಾರಿ ತೋಚದೆ ಕಂಗಾಲಾಗಿದ್ದಾಳೆ. ಇದೇ ಸಮಯದಲ್ಲಿ ಬಗಂಬಿಲದ ಅಟೋ ಚಾಲಕನೊಬ್ಬ ಆಕೆಗೆ ಸಹಾಯ ಮಾಡಲು ಮುಂದಾಗಿದ್ದು, ಆಕೆಯ ಮೊಬೈಲ್ ರಿಪೇರಿ ಮಾಡಲು ಸಹಾಯ ಮಾಡಿದ್ದಾನೆ. ಬಳಿಕ ಆಕೆಗೆ ತಿನ್ನಲು ಆಹಾರ ತೆಗೆದುಕೊಟ್ಟಿದ್ದಾನೆ. ಇದರಿಂದ ಆತನ ಮೇಲೆ ವಿಶ್ವಾಸದಿಂದ ತನ್ನನ್ನು ರೈಲ್ವೇ ಸ್ಟೇಷನ್ ತನಕ ಬಿಡುವಂತೆ ಕೋರಿಕೊಂಡಿದ್ದಾಳೆ. ಇದಾದ ಬಳಿಕ ಅಟೋ ಏರಿದ ಯುವತಿ ಪ್ರಜ್ಞೆ ಕಳೆದುಕೊಂಡಿದ್ದು ಎಚ್ಚರವಾದಗ ಅಟೋ ಚಾಲಕ ಅಲ್ಲದೆ ಇತರ ಮೂವರ ಜೊತೆ ಕಾರಿನಲ್ಲಿ ಇದ್ದುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ. ಎಚ್ಚರವಾಗಿ ಬೊಬ್ಬೆ ಹೊಡೆದ ಯುವತಿಯನ್ನು ನಡು ರಸ್ತೆಯಲ್ಲಿ ಇಳಿಸಿ ಆರೋಪಿಗಳು ಪರಾರಿಯಾಗಿದ್ದಾರೆ.

ಬಳಿಕ ಯುವತಿ ಮನೆಯೊಂದರ ಬಾಗಿಲು ತಟ್ಟಿ ನೀರು ಕೇಳಿ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ತಕ್ಷಣ ಮನೆಯವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಗಂಬಿಲದ ಅಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular