Friday, November 22, 2024
Flats for sale
Homeಜಿಲ್ಲೆಮಂಗಳೂರು : ಬೋಳಂತೂರು ಗಣೇಶೋತ್ಸವ ಮೆರವಣಿಗೆಯಲ್ಲಿ ಸಿಹಿ ತಿಂಡಿ, ಪಾನೀಯ ಹಂಚದಂತೆ ಮಸೀದಿಗೆ ಸಿದ್ಧಿವಿನಾಯಕ ವಿಶ್ವಸ್ಥ...

ಮಂಗಳೂರು : ಬೋಳಂತೂರು ಗಣೇಶೋತ್ಸವ ಮೆರವಣಿಗೆಯಲ್ಲಿ ಸಿಹಿ ತಿಂಡಿ, ಪಾನೀಯ ಹಂಚದಂತೆ ಮಸೀದಿಗೆ ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿ ಪತ್ರ..!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಒಂದು ಕೋಮು ಸೂಕ್ಷ್ಮ ಪ್ರದೇಶ ಇಲ್ಲಿ ಎಲ್ಲರೂ ಜೊತೆಯಲ್ಲಿ ಇದ್ದರೂ ಕೆಲ ಸಂದರ್ಭದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಏರುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಬಾರಿ ಜಿಲ್ಲೆಯ ಬಂಟ್ವಾಳದ ಬೋಳಂತೂರು ಗಣೇಶೋತ್ಸವ ಮೆರವಣಿಗೆ ಸುದ್ದಿಯಲ್ಲಿದೆ ಏಕೆಂದರೆ ಗಣೇಶೋತ್ಸವ ಮೆರವಣಿಗೆ ವೇಳೆ ಮುಸ್ಲಿಮರು ಸಿಹಿ ತಿಂಡಿ, ಪಾನೀಯ ಹಂಚಿದ್ದರು. ಆ ಮೂಲಕ ಸೌಹಾರ್ದತೆ ಮೆರೆದಿದ್ದು ಸುದ್ದಿಯಾಗಿತ್ತು. ಆದರೆ ಈ ಬಾರಿ ಕಳೆದ ವರ್ಷದಂತೆ ಸಿಹಿ ತಿಂಡಿ, ಪಾನೀಯ ಹಂಚಬಾರದು ಎಂದು ಗಣೇಶೋತ್ಸವ ಆಯೋಜಿಸುವ ಸಮಿತಿಯವರೇ ಮುಸ್ಲಿಂ ಸಮುದಾಯದವರಿಗೆ ಪತ್ರ ಬರೆದದ್ದು ಚರ್ಚೆಗೆ ಗ್ರಾಸವಾಗಿದೆ.

ಹೌದು ಇಲ್ಲಿ ಮಸೀದಿಗೆ ಬರೆದ ಪತ್ರ ಸಾಮಾಜಿಕಜಾಲತಾಣದಲ್ಲಿ ವೈರಲ್ ಆಗಿದೆ ಏನೆಂದರೆ ಕಳೆದ ವರ್ಷ ಮುಸಲ್ಮಾನ ಸಮಾಜ ಬಾಂಧವರು ಹಂಚಿದ ಸಿಹಿ ತಿಂಡಿ ತಿಂದು ನಮ್ಮ ಕೆಲವು ಮಕ್ಕಳು ಅಸ್ವಸ್ಥರಾಗಿದ್ದು ಹೀಗಾಗಿ ಈ ಬಾರಿ ಗಣೇಶೋತ್ಸವ ಮೆರವಣಿಗೆಯಲ್ಲಿ ಸಿಹಿ ತಿಂಡಿ, ತಂಪು ಪಾನೀಯ ಹಂಚಬೇಡಿ ಎಂದು ಶ್ರೀ ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿಯಿಂದ ಬೋಳಂತೂರು ಮಸೀದಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ .ಆದರೆ ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿಯು ಮಸೀದಿಗೆ ಬರೆದಿರುವ ಪತ್ರದ ಬಗ್ಗೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಯಾಗಿದ್ದು ನಮ್ಮ ಶೋಭಾಯಾತ್ರೆಗೆ ನಿಮ್ಮ ಎಲ್ಲಾ ಸಮಾಜ ಬಾಂಧವರು ಮೇಲಿನ ವಿಷಯಕ್ಕೆ ಸಹಕರಿಸುವಂತೆ ನಿಮ್ಮಲ್ಲಿ ಈ ಮೂಲಕ ಮನವಿ ಮಾಡುತ್ತೇವೆ’’ ಎಂದು ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿ ಪತ್ರದಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular