Tuesday, March 4, 2025
Flats for sale
Homeಜಿಲ್ಲೆಮಂಗಳೂರು : ಬ್ರಹ್ಮಕಲಶೋತ್ಸವ ಕಾರ್ಯಕ್ರಮ ದ ವೇಳೆ ಕಾಂಗ್ರೆಸ್ ಕಾರ್ಯಕರ್ತನಿಗೆ ನಿಂದಿಸಿ,ಹಲ್ಲೆ ಆರೋಪ,ಶಾಸಕ ವೇದವ್ಯಾಸ್ ಕಾಮತ್...

ಮಂಗಳೂರು : ಬ್ರಹ್ಮಕಲಶೋತ್ಸವ ಕಾರ್ಯಕ್ರಮ ದ ವೇಳೆ ಕಾಂಗ್ರೆಸ್ ಕಾರ್ಯಕರ್ತನಿಗೆ ನಿಂದಿಸಿ,ಹಲ್ಲೆ ಆರೋಪ,ಶಾಸಕ ವೇದವ್ಯಾಸ್ ಕಾಮತ್ ಸೇರಿ 11 ಜನರ ವಿರುದ್ಧ F.I.R ದಾಖಲು…!

ಮಂಗಳೂರು ; ರವಿವಾರ ರಾತ್ರಿ ಪದವು ಶಕ್ತಿನಗರದ ಸಮೀಪದ ಶ್ರೀ ಕೃಷ್ಣ ಭಜನಾ ಮಂದಿರದ ಬ್ರಹ್ಮ ಕಲಶೋತ್ಸವದ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನಿಗೆ ಶಾಸಕ ಹಾಗೂ 11 ಮಂದಿ ಸೇರಿ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಕಂಕನಾಡಿ ಪೋಲಿಸ್ ಠಾಣೆಯಲ್ಲಿ 12 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಎಂಬವರು ದೂರು ನೀಡಿದ್ದು ದೂರಿನಂತೆ ಪ್ರಕರಣ ದಾಖಲಾಗಿದೆ. ರವಿವಾರ ರಾತ್ರಿ ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳನ್ನು ಸ್ವಾಗತಿಸಲು ಸ್ವಯಂಸೇವಕ ಎಂಬ ನೆಲೆಯಲ್ಲಿ ನಾನು ಆಶಾಲತಾ ಹಾಗೂ ದಯಾನಂದ ನಾಯ್ಕ ಎಂಬವರ ಜೊತೆ ನಿಂತಿದ್ದೆ. ಈ ವೇಳೆ ಆಗಮಿಸಿದ ಶಾಸಕ ವೇದವ್ಯಾಸ ಕಾಮತ್ ಅವರು ನಮ್ಮನ್ನು ಉದ್ದೇಶಿಸಿ ‘ದೇವಸ್ಥಾನಕ್ಕೆ ಕಲ್ಲು ಹೊಡೆಯುವ ನಿಮಗೆ ಇಲ್ಲೇನು ಕೆಲಸ?’ ಎಂದು ರಾಜಕೀಯ ಪ್ರೇರಿತವಾಗಿ ಪ್ರಶ್ನಿಸಿದ್ದಾರೆ. ಇದನ್ನು ಆಕ್ಷೇಪಿಸಿದ ನಾವು ಶಾಸಕರನ್ನು ಪ್ರಶ್ನಿಸಿದೆವು. ಈ ವೇಳೆ ಅಶ್ವಿತ್ ಕೊಟ್ಟಾರಿ, ಮಣಿ, ಜಯಪ್ರಕಾಶ್ ಎಂಬವರು ಹಾಗೂ ಇತರ ಏಳೆಂಟು ಮಂದಿ ನನ್ನ ಮೇಲೆ ಹಲ್ಲೆ ನಡೆಸಿ, ಅಂಗಿಯನ್ನು ಹರಿದು ಹಾಕಿದ್ದಾರೆ. ಜಯಪ್ರಕಾಶ್ ಎಂಬಾತ ನನಗೆ ಜೀವ ಬೆದರಿಕೆ ಕೂಡಾ ಹಾಕಿದ್ದಾನೆ ಎಂದು ಯಶವಂತ ಪ್ರಭು ಪೊಲೀಸ್ ದೂರಿನಲ್ಲಿ ಆರೋಪಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular