Saturday, September 5, 2026
Homeಜಿಲ್ಲೆಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ ; ಹೃದಯಾಘಾತದಿಂದ ಮೃತ್ಯು.

ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ ; ಹೃದಯಾಘಾತದಿಂದ ಮೃತ್ಯು.

ಮಂಗಳೂರು : ಅಷ್ಟಮಿ ಪ್ರಯುಕ್ತ ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಭಜನೆ ಕಾರ್ಯಕ್ರಮದ ವೇಳೆ ಭಜನೆ ಮಾಡುತ್ತಲೇ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಮನಕಲಕುವ ಘಟನೆ ತಡರಾತ್ರಿ ನಡೆದಿದೆ.

ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38) ಎಂದು ಗುರುತಿಸಲಾಗಿದೆ. ಭಜನೆ ಮಾಡುತ್ತಿದ್ದ ವೇಳೆ ಶ್ರೀನಾಥ್ ಅವರು ಏಕಾಏಕಿ ಕುಸಿದು ಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಶ್ರೀನಾಥ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅಷ್ಟಮಿ ಪ್ರಯುಕ್ತ ಊರಿಗೆ ಆಗಮಿಸಿದ್ದರು. ಸ್ಥಳೀಯ ಸಂಘಟನೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು ಎಂದು ತಿಳಿದುಬಂದಿದೆ. ಈ ಘಟನೆ ಸ್ಥಳೀಯರಲ್ಲಿ ಹಾಗೂ ಕುಟುಂಬಸ್ಥರಲ್ಲಿ ತೀವ್ರ ಆಘಾತ ಮತ್ತು ದುಃಖಕ್ಕೆ ಕಾರಣವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular