Thursday, July 23, 2026
Homeಜಿಲ್ಲೆಮಂಗಳೂರು : ಭಾರಿ ಮಳೆ : ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆ ವ್ಯಾಪ್ತಿಯ ಪ್ರವಾಸಿ...

ಮಂಗಳೂರು : ಭಾರಿ ಮಳೆ : ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆ ವ್ಯಾಪ್ತಿಯ ಪ್ರವಾಸಿ ತಾಣಗಳಿಗೆ ನಿರ್ಬಂಧ.

ಮಂಗಳೂರು : ಕಳೆದ ಹಲವು ದಿನಗಳಿಂದ ಸುರಿಯುವ ಭಾರಿ ಮಳೆಯ ಹಿನ್ನೆಲೆ ಜಿಲ್ಲೆಯಲ್ಲಿ ಅಲ್ಲಲ್ಲಿ ಭೂಕುಸಿತ ಉಂಟಾಗಿ ಇಲ್ಲಿಯವರೆಗೆ ಹಲವು ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆ ವ್ಯಾಪ್ತಿಯ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ಕೆಲವೆಡೆ ಶಾಲೆಗಳಿಗೆ ರಜೆ ನೀಡಲಾಗಿದೆ. ಅತ್ತ ಉಡುಪಿ ಜಿಲ್ಲೆಯಲ್ಲಿಯೂ ಮಳೆ ಅವಾಂತರ ಸೃಷ್ಟಿಸಿದೆ.

ಇದೀಗ ಜಿಲ್ಲಾಡಳಿತ ಬೆಳ್ತಂಗಡಿ ತಾಲೂಕಿನ ನರಸಿಂಹಗಢ – ಗಡಾಯಿಕಲ್ಲು ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್​ಎಫ್​​ಒಗೆ ಕುದುರೆಮುಖ ಸಿಎಫ್ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular