ಮಂಗಳೂರು : ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರ ಜ್ಞಾನ ಇಲಾಖೆಯಡಿ ಮಂಗಳೂರಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ ಡಿಬಿಎಫ್ಓಟಿ ಆಧಾರದ ಮೇಲೆ ನಗದೀಕರಿಸಲು ಮತ್ತು ಅಭಿವೃದ್ಧಿಪಡಿಸಲು ಸಂಪುಟ ಅನುಮೋದನೆ ನೀಡಿದೆ.
ಯೋಜನೆ ಆರಂಭಿಕ 3೦ ವರ್ಷಗಳವರೆಗೆ ರಿಯಾಯಿತಿ ಹಾಗೂ ನಂತರದಲ್ಲಿ 30 ವರ್ಷಗಳ ಅವಧಿಗೆ ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ. ಯೋಜನೆಗೆ ಒಟ್ಟು 60 ವರ್ಷಗಳವರೆಗೆ ರಿಯಾಯಿತಿ ನೀಡಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಘೋಡಗೇರಿ ಗ್ರಾಮದ 9 ಎಕರೆ ಗಾಯರಾಣ ಜಮೀನನ್ನು ಶ್ರೀ ಶಿವಾನಂದ ಗ್ರಾಮೀಣ ವಿದ್ಯಾ ಪೀಠಕ್ಕೆ ಮಾರುಕಟ್ಟೆ ಬೆಲೆಯ ಶೇ.10ರಷ್ಟಕ್ಕೆನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ತಡೆಗಟ್ಟುವ ಸಲುವಾಗಿ ೫೨ರಿಂದ 54 ಮೀಟರ್ ಎತ್ತರಕ್ಕೆ ತಲುಪುವ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್ ವೇಹಿಕಲ್ ಅನ್ನು 16 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ. ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಸಬಹುದಾದ ಅಗ್ನಿ ಅನಾಹುತ ತಡೆಗಟ್ಟುವ ಸಲುವಾಗಿ ಈ ವಾಹನ ಬಳಕೆಯಾಗಲಿದೆ.