Thursday, July 23, 2026
Homeಜಿಲ್ಲೆಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 45.92 ಲಕ್ಷ ರೂ.ಮೌಲ್ಯದ ಅಕ್ರಮ ಚಿನ್ನ ವಶ.

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 45.92 ಲಕ್ಷ ರೂ.ಮೌಲ್ಯದ ಅಕ್ರಮ ಚಿನ್ನ ವಶ.

ಮಂಗಳೂರು : ಪ್ರಯಾಣಿಕರೊಬ್ಬರು ಅಕ್ರಮವಾಗಿ ಸಾಗಿಸುತ್ತಿದ್ದ 729 ಗ್ರಾಂ ತೂಕದ 45,92,700 ರೂಪಾಯಿ ಮೌಲ್ಯದ ಚಿನ್ನವನ್ನು ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಾರ್ಚ್ 3 ರಂದು ವಶಪಡಿಸಿಕೊಂಡಿದ್ದಾರೆ. ಅಬುಧಾಬಿಯಿಂದ ಏರ್ ಇಂಡಿಯಾ ಎಕ್ಸ್​​ಪ್ರೆಸ್ ವಿಮಾನದಲ್ಲಿ ಆಗಮಿಸಿದ ಕಾಸರಗೋಡು ಮೂಲದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.

ಅಧಿಕಾರಿಗಳು ಆತನ ದೇಹವನ್ನು ತಪಾಸಣೆಗೆ ಒಳಪಡಿಸಿದ ಸಂದರ್ಭದಲ್ಲಿ ಆತನ ಗುದನಾಳದಲ್ಲಿ ಬಚ್ಚಿಟ್ಟಿದ್ದ ಮೂರು ಮೊಟ್ಟೆಯ ಆಕಾರದ ಲಕೋಟೆಗಳಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ.ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಪಡಿಸಿಕೊಂಡು, ನಂತರ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular