Saturday, March 21, 2026
Flats for sale
Homeಕ್ರೈಂಮಂಗಳೂರು : ಮಂಗಳೂರು ನಗರ ಪೊಲೀಸ್ ಸಿಸಿಬಿ ಕಾರ್ಯಾಚರಣೆ : 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖತರ್ನಾಕ್...

ಮಂಗಳೂರು : ಮಂಗಳೂರು ನಗರ ಪೊಲೀಸ್ ಸಿಸಿಬಿ ಕಾರ್ಯಾಚರಣೆ : 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖತರ್ನಾಕ್ ರೌಡಿ ಶೀಟರ್ ನ ಬಂಧನ.

ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಸಿಸಿಬಿ (CCB) ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಫರಾಜ್ @ ಮೊಹಮ್ಮದ್ ಫರಾಜ್ (32) ಎಂದು ಗುರುತಿಸಲಾಗಿದ್ದು, ಇವರು ದೇರಳಕಟ್ಟೆಯ ಮದನಿನಗರ ಸಮೀಪದ ಕೆ2 ಅಪಾರ್ಟ್‌ಮೆಂಟ್ ನಿವಾಸಿಯಾಗಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿಯ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಸೇರಿದಂತೆ ಒಟ್ಟು ಸುಮಾರು 10 ಪ್ರಕರಣಗಳು ದಾಖಲಾಗಿವೆ. ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ವಿಚಾರಣೆಗೆ ಹಾಜರಾಗದೆ ಈತನು ಪರಾರಿಯಾಗಿದ್ದನು.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ 4 ಪ್ರಕರಣಗಳು, ಕೊಣಾಜೆ ಠಾಣೆಯಲ್ಲಿ 2 ಪ್ರಕರಣಗಳು, ಉತ್ತರ ಠಾಣೆಯಲ್ಲಿ 2 ಪ್ರಕರಣಗಳು, ಬರ್ಕೆ ಠಾಣೆಯಲ್ಲಿ 1 ಪ್ರಕರಣ ಮತ್ತು ಉರ್ವ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿವೆ ಎಂದು ತಿಳಿದುಬಂದಿದೆ.

ಇದೇ ವೇಳೆ, ಆರೋಪಿಯು ಉಳ್ಳಾಲ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಪ್ರಸ್ತುತ ಈತನ ವಿರುದ್ಧ 6 ವಾರಂಟ್‌ಗಳು ಹಾಗೂ 1 ಪ್ರೊಕ್ಲಮೇಶನ್ ಜಾರಿಯಲ್ಲಿತ್ತು.ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular