Friday, February 21, 2025
Flats for sale
Homeಕ್ರೈಂಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಬೃಹತ್ ಪ್ರಮಾಣದ ಗಾಂಜಾ ವಶ,ನಾಲ್ವರ ಬಂಧನ..!

ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಬೃಹತ್ ಪ್ರಮಾಣದ ಗಾಂಜಾ ವಶ,ನಾಲ್ವರ ಬಂಧನ..!

ಮಂಗಳೂರು : ಅಂತರ್ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಟಾಟಾ 407 ಗೊಡ್ಡ ಟೆಂಪೋ ವಾಹನದಲ್ಲಿ ಹಾಗೂ ಮಾರುತಿ ಅಯ್ಯೋ ಕಾರಿನಲ್ಲಿ ಬೃಹತ್ ಪ್ರಮಾಣದಲ್ಲಿ ನಿಷೇದಿತ ಮಾದಕ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 119 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವ ಬೃಹತ್ ಕಾರ್ಯಾಚರಣೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಫೆ 17 ರಂದು ಮಂಗಳೂರು ನಗರಕ್ಕೆ ಅಂಧ್ರಪ್ರದೇಶ ರಾಜ್ಯದಿಂದ ಟಾಟಾ 407 ಗೂಡ್ಸ್ ಟೆಂಪೋ ವಾಹನದಲ್ಲಿ ಹಾಗೂ ಮಾರುತಿ ಅಲ್ಲೋ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ 2 ವಾಹನಗಳನ್ನು ಪತ್ತೆ ಹಚ್ಚಿ ವಾಹನದಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಉಪ್ಪಳ ಕಾಸರಗೋಡು ನಿವಾಸಿ . ಮೊಯ್ದಿನ್ ಶಬ್ಬಿರ್(38)ಮಹಾರಾಷ್ಟ್ರ ಥಾಣೆ ನಿವಾಸಿ ಮಹೇಶ್ ದ್ವಾರಿಕಾನಾಥ ಪಾಂಡೆ(30) ಕೇರಳ ರಾಜ್ಯ ಅಲಪ್ಪುಯ ಜಿಲ್ಲೆಯ ಅಜಯ್ ಕೃಷ್ಣ(33) ಹಾಗೂ ಹರಿಯಾಣ ರಾಜ್ಯ ಜೀವನ್ ಸಿಂಗ್(35) ಎಂಬವರನ್ನು ಬಂಧಿಸಿದ್ದಾರೆ.

ಆರೋಪಿಗಳು ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ ಮೀನು KL-01-BF-9310 (Tata 407- Insulator Vehicle) AP-31-BP-3575 ಮಾರುತಿ ಆಲ್ವೇ ಕಾರನ್ನು ಹಾಗೂ ಈ ವಾಹನಗಳಲ್ಲಿ ಸಾಗಾಟ ಮಾಡುತ್ತಿದ್ದ ರೂ. 35,00,000/- ಮೌಲ್ಯದ ನಿಷೇಧಿತ ಮಾದಕ ವಸ್ತುವಾದ 119 ಕೆಜಿ ಗಾಂಜಾವನ್ನು ಅಲ್ಲದೇ 5 ಮೊಬೈಲ್ ಫೋನ್ ಗಳು, ಮೀನು ಸಾಗಾಟಕ್ಕೆ ಉಪಯೋಗಿಸುವ ಮೀನಿನ ಕ್ರೆಟ್ ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗಳು ಆಂಧ್ರಪ್ರದೇಶದಿಂದ ಬೆಂಗಳೂರು – ಮಂಗಳೂರು ಮೂಲಕ ಕೇರಳ ರಾಜ್ಯದ ಕಾಸರಗೋಡಿಗೆ ಟಾಟಾ 407 ಗೂಡ್ಸ್ ಟೆಂಪೋ ಹಾಗೂ ಮಾರುತಿ ಆಲ್ಲೋ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದರು. ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 51,00,000/- ರೂ ಮೌಲ್ಯದ ವಸ್ತುಗಳನ್ನು ವಶಪಡಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular