Wednesday, March 18, 2026
Flats for sale
Homeಜಿಲ್ಲೆಮಂಗಳೂರು : ಮಾರ್ಚ್ 21ರಂದು ಕರಾವಳಿ ಉತ್ಸವ ಮೈದಾನದಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಮಂಗಳೂರು ಘಟಕದ...

ಮಂಗಳೂರು : ಮಾರ್ಚ್ 21ರಂದು ಕರಾವಳಿ ಉತ್ಸವ ಮೈದಾನದಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಮಂಗಳೂರು ಘಟಕದ ವತಿಯಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ.

ಮಂಗಳೂರು : ಆಳ್ವಾಸ್ ನುಡಿಸಿರಿ-ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರಿನ ಲಾಲ್ಟಾಗ್ ಕರಾವಳಿ ಉತ್ಸವ ಮೈದಾನದ ಕೀರ್ತಿಶೇಷ ಡಾ ಎನ್ ವಿನಯ್ ಹೆಗ್ಡೆ ವೇದಿಕೆಯಲ್ಲಿ ಮಾರ್ಚ್ 21ರ ಸಂಜೆ 6.15ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಮೇಕೈಹಿಸಲಿದೆ ಎಂದು ಡಾ. ಮೋಹನ್ ಆಳ್ವ ರವರು ತಿಳಿಸಿದ್ದಾರೆ.

ಆರಂಭದಲ್ಲಿ 45 ನಿಮಿಷಗಳ ಕಾಲ ನಡೆಯುವ ಸಭಾಕರ್ಯಕ್ರಮವನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಿದರೆ, ಮಂಗಳೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಸಮಾಜದ ಎಲ್ಲಾ ಸ್ತರಗಳ ಪ್ರಮುಖರು ಸಭಾ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯಲ್ಲಿ ಹಾಜರಿರಲಿದ್ದಾರೆ. ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕೀರ್ತಿಶೇಷ ಡಾ. ಎನ್. ವಿನಯ್ ಹೆಗ್ಡೆಯವರಿಗೆ ಅರ್ಪಿಸಲಾಗಿದೆ ಎಂದು ಹೇಳಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ-ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಮಲ್ಲಕಂಬ ಹಾಗೂ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ ಹಿರಣ್ಯಾಕ್ಷ ವಧೆ, ಬೊಂಬೆ ವಿನೋದಾವಳಿಯ ಪ್ರದರ್ಶನ ನಡೆಯಲಿದೆ ಎಂದರು.

ಪ್ರೇಕ್ಷಕರಿಗಾಗಿ 8,000ಕ್ಕೂ ಅಧಿಕ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರಲಿದೆ. ಸಾಂಸ್ಕೃತಿಕ ಕರ್ಯಮವು ಕ್ಲಪ್ತ ಸಮಯಕ್ಕೆ ಆರಂಭವಾಗಿ ನಿಗದಿತ ಸಮಯಕ್ಕೆ ಮುಕ್ತಾಯಗೊಳ್ಳಲಿದೆ.

ಆಳ್ವಾಸ್ ಸಾಂಸ್ಕೃತಿಕ ವೈಭವವು ಕರ್ನಾಟಕದ ಅತ್ಯಂತ ಪ್ರಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಇದು ಕೇವಲ ಒಂದು ಕಾರ್ಯಕ್ರಮವಲ್ಲ, ನಮ್ಮ ದೇಶದ ಸಂಸ್ಕೃತಿ, ಪರಂಪರೆ ಮತ್ತು ವೈವಿಧ್ಯತೆಯ ಸೊಬಗನ್ನು ಒಂದೇ ವೇದಿಕೆಯಲ್ಲಿ ಕಣ್ಣುತುಂಬಿಸಿಕೊಳ್ಳಲು ಇರುವ ಸುಂದರ ಅವಕಾಶ. ಈ ಕಾರ್ಯಕ್ರಮದ ಮೂಲಕ ನೂರು ಸಂದೇಶಗಳು ಸಮಾಜಕ್ಕೆ ತಲುಪಿ, ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯವಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರದೀಪ್ ಕಲ್ಕೂರ,ಶಶಿರಾಜ್ ಕಾವೂರು,ಲೀಲಾಕ್ಷ ಕರ್ಕೇರ,ಹಾಗೂ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular