Wednesday, October 22, 2025
Flats for sale
Homeಜಿಲ್ಲೆಮಂಗಳೂರು ; “ಮಿಡ್ಲ್ ಕ್ಲಾಸ್ ಫ್ಯಾಮಿಲಿ" ತುಳು ಸಿನಿಮಾ ಜನವರಿ 31 ರಂದು ಕರಾವಳಿ ಜಿಲ್ಲೆಯಾದ್ಯಂತ...

ಮಂಗಳೂರು ; “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಜನವರಿ 31 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ,ಸಿನಿಮಾ ನೋಡಿದವರಿಗೆ ಪ್ಲಾಟ್ ಖರಿದಿಸಲು ರೋಹನ್ ಕಾರ್ಪೊರೇಷನ್ ನಿಂದ 10% ಡಿಸ್ಕೌಂಟ್,ಭರ್ಜರಿ ಆಫರ್…!

ಮಂಗಳೂರು : ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಸೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲ್ಡ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಅನೇದ್ ಎನ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಬುಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಜನವರಿ 31 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್’ನ ಬಿಗ್ ಸಿನಿಮಾಸ್, ಪಿವಿಆ‌ರ್,ಸಿನಿಪೊಲಿಸ್, ಭಾರತ್ ಸಿನಿಮಾಸ್ ದೇರಳಕಟ್ಟೆ, ಪುತ್ತೂರು, ಪಡುಬಿದ್ರೆ, ಉಡುಪಿಯಲ್ಲಿ ಕಲ್ಪನಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ ಮೊದಲಾದ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ.

‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ ತಂಡದ ಬಹುತೇಕ ತಂತ್ರಜ್ಞರು, ಕಲಾವಿದರು ಇಲ್ಲಿ ದುಡಿದಿದ್ದಾರೆ. ಮುಖ್ಯವಾಗಿ ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ಸಿನಿಮಾದ ನಿರ್ದೇಶಕ ರಾಹುಲ್ ಅಮೀನ್ ಇಲ್ಲೂ ನಿರ್ದೇಶಕರಾಗಿದ್ದಾರೆ. ವಿನೀತ್ ಕುಮಾರ್ ನಾಯಕ ನಟನಾಗಿ ಸಮತಾ ಅಮೀನ್ ನಾಯಕಿಯಾಗಿ ಹಾಗೂ ತುಳು ಚಿತ್ರರಂಗದ ಮೇರು ಕಲಾವಿದರಾದ ನವೀನ್ ಡಿ.ಪಡೀಲ್,ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಚೈತ್ರಾ ಶೆಟ್ಟಿ(ಚಿಂಪು), ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರ್, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಮೈಮ್ ರಾಮದಾಸ್, ರೂಪ ವರ್ಕಾಡಿ, ರವಿ ರಾಮಕುಂಜ, ಶೋಭಾ ರೈ, ಶರಣ್ ಚಿಲಿಂಬಿ, ಸಾಹಿಲ್ ರೈ ಹಾಗೂ ಗೌರವ ಪಾತ್ರದಲ್ಲಿ ನವನೀತ್ ಶೆಟ್ಟಿ ಕದ್ರಿಯವರು ಅಭಿನಯಿಸಿದ್ದಾರೆ. ಸೃಜನ್ ಕುಮಾರ್ ತೋನ್ಸೆ ಸಂಗೀತ ನೀಡಿದ್ದಾರೆ. ಛಾಯಾಗ್ರಾಹಕರಾಗಿ ವಿಷ್ಣು ಪ್ರಸಾದ್ ಪಿ, ಸಂಕಲನ ವಿಶಾಲ್ ದೇವಾಡಿಗ, ಡಿ.ಐ ಮತ್ತು ವರ್ಣ ಪ್ರಜ್ವಲ್ ಸುವರ್ಣ, ವಸ್ತ್ರವಿನ್ಯಾಸ ವರ್ಷ ಆಚಾರ್ಯ, ಡಿಜಿಟಲ್ ಮಾರ್ಕೆಟಿಂಗ್ ಆಯುಷ್ಮಾನ್ ಹಾಗೂ ನವೀನ್ ಕುಮಾ‌ರ್ ಶೆಟ್ಟಿ ಮತ್ತು ವಿನಾಯಕ ಆಚಾರ್ಯ ನೃತ್ಯ ಸಂಯೋಜಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪವನ್ ಕುಮಾ‌ರ್,ನಿತಿನ್ ರಾಜ್ ಶೆಟ್ಟಿ, ಸುಹಾನ್ ಪ್ರಸಾದ್, ಭರತ್ ಕುಮಾರ್ ಗಟ್ಟಿ, ಗಣೇಶ್ ಕೊಲ್ಯ, ಅಶ್ವಿನಿ ರಕ್ಷಿತ್, ಕ್ಷಿತಿಂದ್ರ ಕೋಟೆಕಾರ್, ಮಿತ್ರಂಪಾಡಿ ಜಯರಾಮ್ ರೈ, ಕಿರಣ್ ಶೆಟ್ಟಿ, ಸ್ವಸ್ತಿಕ್ ಆಚಾರ್ಯ ಸಹ ನಿರ್ಮಾಪಕರಾಗಿದ್ದಾರೆ. ಪ್ರೊಡಕ್ಷನ್ ಮ್ಯಾನೇಜರ್ ಕಾರ್ತಿಕ್ ರೈ ಅಡ್ಯನಡ್ಕ, ನಿತಿನ್ ಶೇರಿಗಾರ್ ಮತ್ತು ಜೀತೇಶ್‌ ಕುಮಾ‌ರ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ಈಗಾಗಲೇ ಈ ಚಿತ್ರವನ್ನು UAE ರಾಷ್ಟ್ರದಲ್ಲಿ ಮೋನಿಷ ಶರತ್ ಶೆಟ್ಟಿ, ಹರೀಶ್ ಬಂಗೇರ, ಹರೀಶ್ ಶೇರಿಗಾ‌ರ್, ಗಿರೀಶ್ ನಾರಾಯಣ್, ದೀಪಕ್ ಕುಮಾರ್ ರವರು ಅರ್ಪಿಸಲು ಮುಂದಾಗಿದ್ದು, ದುಬೈನ ಗಮ್ಮತ್ ಕಲಾವಿದರ ಪೈಕಿ 5 ಕಲಾವಿದರಾದ ಚಿದಾನಂದ ಪೂಜಾರಿ, ಗಿರೀಶ್ ನಾರಾಯಣ್, ಡೋನಿ ಕೊರೆಯ, ಆಶಾ ಕೊರೆಯ ಮತ್ತು ದೀಪ್ತಿ ದಿನ್ ರಾಜ್ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜನವರಿ 19 ರಂದು ಯುಎಇ ಯಲ್ಲಿ ದಾಖಲೆಯ 16 ಪ್ರೀಮಿಯರ್ ಶೋ ಈಗಾಗಲೇ ಯಶಸ್ವಿಯಾಗಿ ಪ್ರದರ್ಶನ ಕಂಡಿದ್ದು ಪ್ರಶಂಸೆಗೆ ಪಾತ್ರವಾಗಿದೆ.

ಜನವರಿ 26 ರಂದು ರೋಹನ್ ಕಾರ್ಪೊರೇಷನ್‌’ನ ಎಂ.ಡಿ ಹಾಗೂ ಚೇರ್ ಮ್ಯಾನ್ ರೋಹನ್ ಮೊಂತೆರೋರವರ ನೇತೃತ್ವದಲ್ಲಿ ಮಂಗಳೂರಿನ ಭಾರತ್ ಸಿನಿಮಾಸ್ ನಲ್ಲಿ 3 ಪ್ರೀಮಿಯರ್ ಶೋ ನಡೆದಿದ್ದು, ಪ್ರೇಕ್ಷಕರ ಜನ-ಮನ ಗೆದ್ದು ಬೀಗಿದೆ. ಜನವರಿ 31 ನೇ ತಾರೀಕು ತುಳುನಾಡಿನಾದ್ಯಂತ ಹಾಗೂ ಫೆ.7 ರಂದು UAE ಯಲ್ಲಿ ಬಿಡುಗಡೆಯಾಗುತ್ತಿರುವುದು ಹೆಮ್ಮೆಯ ಸಂಗತಿ. ‘ಮಿಡಲ್ ಕ್ಲಾಸ್ ಫ್ಯಾಮಿಲಿ’ ಫೆ.2 ರಂದು ಕೆನಡದಲ್ಲು ತೆರೆಕಾಣಲಿರುವುದು.

ಸಿನಿಮಾ ಕೌಟುಂಬಿಕ ಕಥೆಯನ್ನು ಒಳಗೊಂಡಿದೆ. ಹಾಸ್ಯಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ‘ರಾಜ್ ಸೌಂಡ್ಸ್ 2 ಆ್ಯಂಡ್ ಲೈಟ್ಸ್’ ಸಿನಿಮಾದಂತೆ ಈ ಸಿನಿಮಾ ಕೂಡಾ ತುಳುಚಿತ್ರರಂಗದಲ್ಲಿ ದೊಡ್ಡ ಸೌಂಡ್ ಮಾಡಲಿದೆ. ಈಗಾಗಲೇ ಸಿನಿಮಾದ ಟೈಟಲ್ ಸ್ಟಾಂಗ್, ಟ್ರೇಲರ್ ಸೂಪರ್ ಹಿಟ್ ಆಗಿದೆ. ಜೊತೆಗೆ ಸಿನಿಮಾದ ನಾಯಕ ನಟ ವಿನೀತ್ ಕುಮಾರ್ ಮತ್ತು ನಾಯಕಿ ನಟಿ ಸಮತಾ ಅಮೀನ್ ಜೋಡಿ ಪ್ರೇಕ್ಷಕರಿಗೆ ಮೋಡಿ ಮಾಡಲಿದೆ ಎಂದು ತಿಳಿಸಿದ್ದಾರೆ .

ಈ ಬಗ್ಗೆ ಸಿನಿಮಾದ ಬಗ್ಗೆ ಪ್ರಸ್ತಾಪಿಸಿದ ಖ್ಯಾತ ಬಿಲ್ಡರ್ ರೋಹನ್ ಕಾರ್ಪೊರೇಷನ್ ರವರು ಸಿನಿಮಾ ಬಿಡುಗಡೆಯಾಗಿ 2 ವಾರದ ಒಳಗಡೆ ಯಾರೆಲ್ಲ ವಿಕ್ಷಿಸುತ್ತಾರೊ ಅವರು ಸಿನಿಮಾದ ಟೀಕೆಟ್ ನೀಡಿದರೆ ರೋಹನ್ ಕಾರ್ಪೊರೇಷನ್ ನಲ್ಲಿ ಫ್ಲಾಟ್ ಖರಿದಿಸಿದರೆ ಭರ್ಜರಿ 10 % ಡಿಸ್ಕೌಂಟ್ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರೋಹನ್ ಮೊಂತೆರೊ,ಆನಂದ ಕುಂಪಾಲ್,ಗಣೇಶ್ ಕೊಲ್ಯ,ಕಿರಣ್ ಶೆಟ್ಟಿ,ಹರಿಪ್ರಸಾದ್ ರೈ,ಅಶ್ವಿನಿ ರಕ್ಷಿತ್, ನಿರ್ದೇಶಕ ರಾಹುಲ್ ಅಮೀನ್,ವಿನೀತ್ ಕುಮಾರ್,ನಟಿ ಸಮತಾ ಅಮೀನ್,ಭರತ್ ಗಟ್ಟಿ,ಚೈತ್ರ ಶೆಟ್ಟಿ,ಸಾಹಿಲ್ ರೈ,ರೀಷಬ್ ರಾವ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular