ಮಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ವಿಭಾಗದ ಡಿಜಿ ಮತ್ತು ಐಜಿಪಿ ಡಾ. ಅಲೋಕ್ ಮೋಹನ್, ಐಪಿಎಸ್ ಅವರು ಇಂದು ಮಂಗಳೂರು ನಗರಕ್ಕೆ ಭೇಟಿ ನೀಡಿ, 2024ರ ಸಂಸತ್ ಚುನಾವಣೆಗೆ ಕೈಗೊಂಡಿರುವ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಮತ್ತು ಪಶ್ಚಿಮ ವಲಯದ ಎಲ್ಲಾ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಪರಿಶೀಲನೆ ಸಭೆ ನಡೆಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಗೆ ಇಲಾಖೆ ಎಲ್ಲಾ ರೀತಿಯಲ್ಲೂ ಸಿದ್ದವಾಗಿದ್ದು, ಹಿರಿಯ ಅಧಿಕಾರಿಗಳು ವೈಯಕ್ತಿಕವಾಗಿ ಚುನಾವಣೆ ಕಾರ್ಯದಲ್ಲಿ ಭಾಗವಹಿಸುತ್ತಿದ್ದು ಮತ್ತು ರಾಜ್ಯಾದ್ಯಂತ ನಮ್ಮ ಸಹವರ್ತಿಗಳೊಂದಿಗೆ ನಿಕಟ ಸಮನ್ವಯದಿಂದ ಕೆಲಸ ಮಾಡಲು ಸೂಚನೆ ನೀಡಿದ್ದಾರೆಂದು ತಿಳಿಸಿದ್ದಾರೆ.


