Wednesday, September 16, 2026
Homeಜಿಲ್ಲೆಮಂಗಳೂರು : ಮೂಡು ಶೆಡ್ಡೆ MSPC ಕೇಂದ್ರಕ್ಕೆ ಅಧಿಕಾರಿಗಳ ದಿಢೀರ್ ಭೇಟಿ ; ಪೌಷ್ಟಿಕ ಆಹಾರದ...

ಮಂಗಳೂರು : ಮೂಡು ಶೆಡ್ಡೆ MSPC ಕೇಂದ್ರಕ್ಕೆ ಅಧಿಕಾರಿಗಳ ದಿಢೀರ್ ಭೇಟಿ ; ಪೌಷ್ಟಿಕ ಆಹಾರದ ಮಾದರಿ ಸಂಗ್ರಹ.

ಮಂಗಳೂರು : ಮೂಡು ಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕು ಹಾಗೂ ನಗರ ಮಹಿಳಾ ಮತ್ತು ಮಕ್ಕಳ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ (MSPC) ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಂಗನವಾಡಿ ಮಕ್ಕಳಿಗೆ ವಿತರಿಸಲಾಗುವ ಪೂರಕ ಪೌಷ್ಟಿಕ ಆಹಾರದ ಗುಣಮಟ್ಟ, ತಯಾರಿಕಾ ಪ್ರಕ್ರಿಯೆ ಹಾಗೂ ಕೇಂದ್ರದಲ್ಲಿನ ಸ್ವಚ್ಛತಾ ವ್ಯವಸ್ಥೆಯನ್ನು ಅಧಿಕಾರಿಗಳು ಪರಿಶೀಲಿಸಿದರು. ಪುಷ್ಠಿ, ಮಿಲ್ಲೆಟ್ ಲಡ್ಡು ಪೌಡರ್ ಹಾಗೂ ಸಾಂಬಾರ್ ಪೌಡರ್ ತಯಾರಿಕೆಯನ್ನೂ ಪರಿಶೀಲಿಸಲಾಯಿತು.

ಆಹಾರ ತಯಾರಿಕಾ ಸ್ಥಳದಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಿಬ್ಬಂದಿಗೆ ಸೂಚಿಸಲಾಯಿತು. ಆಹಾರ ಸುರಕ್ಷತಾ ಕಾಯ್ದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ನಿರ್ದೇಶನ ನೀಡಿದರು.

ಆಹಾರದ ಮಾದರಿ ಸಂಗ್ರಹ
ಪರಿಶೀಲನೆಯ ವೇಳೆ ಪುಷ್ಠಿ ಆಹಾರ ಸೇರಿದಂತೆ ಮಿಲ್ಲೆಟ್ ಲಡ್ಡು ಪೌಡರ್ ಹಾಗೂ ಸಾಂಬಾರ್ ಪೌಡರ್‌ನ ಮಾದರಿಗಳನ್ನು ಅಧಿಕಾರಿಗಳು ಸಂಗ್ರಹಿಸಿದರು. ಸಂಗ್ರಹಿಸಿದ ಮಾದರಿಗಳನ್ನು ಅಧಿಕೃತ ಆಹಾರ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ರವಾನಿಸಲಾಗಿದೆ.

ಪ್ರಯೋಗಾಲಯದ ವರದಿ ಬಂದ ಬಳಿಕ ಅದರ ಆಧಾರದ ಮೇಲೆ ನಿಯಮಾನುಸಾರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ಯಾಕಿಂಗ್ ವ್ಯವಸ್ಥೆ ಸುಧಾರಣೆಗೆ ಸೂಚನೆ.

ಆಹಾರ ಪ್ಯಾಕಿಂಗ್ ಪ್ರಕ್ರಿಯೆಯಲ್ಲೂ ಹಲವು ಸೂಚನೆಗಳನ್ನು ನೀಡಲಾಯಿತು. ಕೈಯಿಂದ ಪ್ಯಾಕಿಂಗ್ ಮಾಡುವ ಬದಲು ಸೂಕ್ತ ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಪ್ಯಾಕಿಂಗ್ ಪ್ರಕ್ರಿಯೆ ನಡೆಸುವಂತೆ ನಿರ್ದೇಶಿಸಲಾಯಿತು. ಅಲ್ಲದೆ, ಪ್ಯಾಕಿಂಗ್‌ಗೆ ಗುಣಮಟ್ಟದ ಫುಡ್‌ಗ್ರೇಡ್ ಪ್ಲಾಸ್ಟಿಕ್ ಬಳಸಬೇಕು. ಪ್ರತಿ ಪ್ಯಾಕೆಟ್‌ನಲ್ಲಿ ತಯಾರಿಕಾ ದಿನಾಂಕ, ಅವಧಿ ಮುಕ್ತಾಯ ದಿನಾಂಕ ಹಾಗೂ ಬ್ಯಾಚ್ ನಂಬರ್ ಸೇರಿದಂತೆ ಕಡ್ಡಾಯ ಲೇಬಲಿಂಗ್ ವಿವರಗಳನ್ನು ಸ್ಪಷ್ಟವಾಗಿ ನಮೂದಿಸುವಂತೆ ಸೂಚಿಸಲಾಯಿತು.
ಲೇಬಲ್‌ನಲ್ಲಿರುವ ಮಾಹಿತಿಗಳು ಗ್ರಾಹಕರಿಗೆ ಸ್ಪಷ್ಟವಾಗಿ ಕಾಣುವಂತಿರಬೇಕು ಹಾಗೂ ಪ್ಯಾಕಿಂಗ್ ಮತ್ತು ಲೇಬಲಿಂಗ್‌ನಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದರು.

ಉಪನಿರ್ದೇಶಕರಿಗೆ ಪತ್ರ.

ಪರಿಶೀಲನೆಯ ನಂತರ ಮುಂದಿನ ಕ್ರಮಕ್ಕಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕರಿಗೆ ಪತ್ರ ಬರೆಯಲು ನಿರ್ಧರಿಸಲಾಯಿತು. ಆರೋಗ್ಯ ಸಚಿವರ ಸೂಚನೆಯಂತೆ ಅಂಗನವಾಡಿ ಮಕ್ಕಳಿಗೆ ವಿತರಿಸಲಾಗುವ ಪೌಷ್ಟಿಕ ಆಹಾರದ ಗುಣಮಟ್ಟ ಮತ್ತು ಆಹಾರ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಗುಣಮಟ್ಟದ ಆಹಾರ ಖಚಿತಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular