Sunday, June 1, 2025
Flats for sale
Homeಸಿನಿಮಾಮಂಗಳೂರು : ಮೇ 16 ರಂದು "ಲೈಟ್ ಹೌಸ್" ಕನ್ನಡ ಚಲನಚಿತ್ರ ತೆರೆಗೆ…!

ಮಂಗಳೂರು : ಮೇ 16 ರಂದು “ಲೈಟ್ ಹೌಸ್” ಕನ್ನಡ ಚಲನಚಿತ್ರ ತೆರೆಗೆ…!

ಮಂಗಳೂರು ; ಅಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಶ್ಚ ಕ್ರಿಯೇಶನ್ಸ್ ಬ್ಯಾನ‌ರ್ ಅಡಿಯಲ್ಲಿ ಮೂಡಿ ಬಂದಿರುವ “ಲೈಟ್ ಹೌಸ್” ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲು ಸಜ್ಜಾಗಿದೆ ಎಂದು ಸಂದೀಪ್ ಕಾಮತ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಶ್ರೀ ದತ್ತಾತ್ರೆಯ ಪಾಟ್ಕರ್ ಬಂಟಕಲ್ಲು ಇವರ ನಿರ್ಮಾಣದಲ್ಲಿ, ಸಂದೀಪ್ ಕಾಮತ್ ಅಜೆಕಾರು ಇವರ ನಿರ್ದೇಶನದಲ್ಲಿ ಸಿನೆಮಾ ಮೂಡಿಬಂದಿದ್ದು. ಕರಾವಳಿ ಭಾಗದಕಲೆ-ಸಂಸ್ಕೃತಿ-ಆಚಾರ-ವಿಚಾರಗಳನ್ನು ಬಹಳ ಸುಂದರವಾಗಿ ಸಿನೆಮಾದಲ್ಲಿ ತೋಸಿಸಲಾಗಿದೆ. ಚಿತ್ರದ ಬಹುತೇಕ ಎಲ್ಲಾ ಚಿತ್ರೀಕರಣವನ್ನು ಉಡುಪಿಯಲ್ಲಿ ನಡೆಸಲಾಗಿದ್ದು. ಕರಾವಳಿಯ ಸೌಂದರ್ಯವನ್ನು ಸಿನೆಮಾದಲ್ಲಿ ಸೆರೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.

“ಲೈಟ್ ಹೌಸ್” ಸಂಪೂರ್ಣ ಸಾಂಸಾರಿಕ ಚಿತ್ರವಾಗಿದ್ದು, ಇಡೀ ಸಂಸಾರ ಮಕ್ಕಳ ಜೊತೆ ಕೂತು ನೋಡುವ ಸಿನೆಮಾ ಇದಾಗಿದ್ದು, ಪ್ರಸ್ತುತ ಕನ್ನಡ ಮಾದ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು, ನೇತ್ರದಾನದ ಮಹತ್ವ ಹಾಗೂ ಕರಾವಳಿಯ ಕಲೆ-ಸಂಸ್ಕೃತಿಯನ್ನು ಸಮಾಜಕ್ಕೆ ತೋರಿಸುವ ಕಥೆ ಈ ಚಿತ್ರದಲ್ಲಿದೆ ಎಂದು ನಟಿ ಶೈಲಶ್ರಿ ಮುಲ್ಕಿಯವರು ತಿಳಿಸಿದ್ದಾರೆ.

ಈ ಚಿತ್ರದಲ್ಲಿ 50 ಕ್ಕೂ ಮಕ್ಕಳು ನಟಿಸಿದ್ದು ಹೆಸರಾಂತ ಕಲಾವಿದರಾದ ಶೋಭರಾಜ್ ಪಾವೂರು. ಮಾನಸಿ ಸುಧೀರ್, ಪ್ರಕಾಶ್ ತೂಮಿನಾಡು, ದೀಪಕ್ ರೈ ಪಾಣಾಜೆ, ಪೃಥ್ವಿ ಅಂಬರ್, ರಾಹುಲ್ ಅಮೀನ್, ಶೈಲಶ್ರೀ ಮುಲ್ಕಿ. ಶೀತಲ್ ನಾಯಕ್, ಅಚಲ್ ಜಿ ಬಂಗೇರ, ಅಪೂರ್ವ ಮಾಳ, ಚಂದ್ರಕಲಾ ರಾವ್, ತಿಮ್ಮಪ್ಪ ಕುಲಾಲ್, ನಮಿತಾ ಕಿರಣ್ ಮುಂತಾದವರು ಚಿತ್ರದ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

ಚಿತ್ರದಲ್ಲಿ ಒಟ್ಟು 4 ಹಾಡುಗಳಿದ್ದು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹಾಗೂ ಕ್ಲಿಂಗ್ ಜಾನ್ಸನ್ ಇವರ ಸಾಹಿತ್ಯಕ್ಕೆ ಹೆಸರಾಂತ ಗಾಯಕರಾದ ವಿಜಯ್ ಪ್ರಕಾಶ್, ವಾಸುಕೀ ವೈಭವ್, ಪೃಥ್ವಿ ಭಟ್, ದಿಯಾ ಹೆಗ್ಡೆ ಚಿತ್ರದ ಹಾಡುಗಳಿಗೆ ಧ್ವನಿ ನೀಡಿರುತ್ತಾರೆ ಎಂದು ತಿಳಿಸಿದ್ದಾರೆ.

ಚಿತ್ರದ ಛಾಯಗ್ರಹಣ ಹಾಗೂ ಸಂಕಲನದ ಜವಬ್ದಾರಿಯನ್ನು ಪ್ರಜ್ವಲ್ ಸುವರ್ಣ ವಹಿಸಿಕೊಂಡಿದ್ದು, ಚಿತ್ರಕ್ಕೆ ಸಂಗೀತವನ್ನು ಕಾರ್ತಿಕ್ ಮುಲ್ಕಿ ನೀಡಿರುತ್ತಾರೆ. ಉಡುಪಿ ನಮ್ಮ ಊರು ಹಾಡಿಗೆ ಗಿರಿಧರ್ ದಿವಾನ್ ಸಂಗೀತವನ್ನು ನೀಡಿರುತ್ತಾರೆ ಎಂದರು.

ಮೇ 16 ರಂದು “ಲೈಟ್ ಹೌಸ್” ಚಲನಚಿತ್ರ ರಾಜ್ಯದ ಬಹುತೇಕ ಕಡೆಗಳಲ್ಲಿ ತೆರೆಕಾಣಲಿದ್ದು ಚಿತ್ರದಲ್ಲಿ ಸಮಾಜದ ಜನತೆಗೆ ಹಾಗೂ ಮಕ್ಕಳಿಗೆ ಅನೇಕ ಸಂದೇಶಗಳು ಇದ್ದು. ಪ್ರತೀ ಒಬ್ಬ ಪೋಷಕರು ತಮ್ಮ ಮಕ್ಕಳೊಂದಿಗೆ ಕೂತು ಸಿನೆಮಾವನ್ನು ನೋಡಬಹುದಾಗಿದೆ ಎಂದು ಚಿತ್ರದ ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದತ್ತಾತ್ರೇಯ ಪಾಟ್ಕರ್, ಯತೀಶ್ ಪೂಜಾರಿ ಹಾಗೂ ಪುಂಡಲಿಕ ಮರಾಠೆಯವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular