ಮಂಗಳೂರು : ಮಂಗಳೂರಿನ ಮಾತಾ ಅಮೃತಾನಂದಮಯಿ ಮಠಕ್ಕೆ ಮೇ 28ರಂದು ಆಗಮಿಸಲಿರುವ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ “ಬ್ರಹ್ಮಸ್ಥಾನಂ ಮಹೋತ್ಸವ ಮತ್ತು ಅಮೃತಸಂಗಮ 2026” ಕಾರ್ಯಕ್ರಮದ ಅಂಗವಾಗಿ ಇಂದು ಚಪ್ಪರ ಮುಹೂರ್ತ ನೆರವೇರಿತು.

ಸ್ವಾಮಿನಿ ಮಂಗಳಾಮೃತ ಪ್ರಾಣ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ನಿಕಟಪೂರ್ವ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಭಾರತವು ಮಾನವ ಮಹಾದೇವತ್ವಕ್ಕೆ ಏರುವ ಪುಣ್ಯಭೂಮಿಯಾಗಿದ್ದು, ಮಾತಾ ಅಮೃತಾನಂದಮಯಿ ದೇವಿಯವರು ಪ್ರೀತಿ ಮತ್ತು ಮಾನವೀಯತೆಯ ಸಂದೇಶವನ್ನು ಜಗತ್ತಿಗೆ ಸಾರುತ್ತಿರುವ “ನಡೆದಾಡುವ, ಮಾತನಾಡುವ ದೇವರು” ಎಂದರು. ಅಮ್ಮನವರು ಶಿಕ್ಷಣ, ಆರೋಗ್ಯ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿರುವುದನ್ನು ಅವರು ಪ್ರಶಂಸಿಸಿದರು.
ಗೌರವಾಧ್ಯಕ್ಷ ಡಾ. ಜೀವರಾಜ್ ಸೊರಕೆ ಮಾತನಾಡಿ, ರಾಜ್ಯದಲ್ಲಿ ಈ ಬಾರಿ ಅಮ್ಮನವರು ಭೇಟಿ ನೀಡುವ ಏಕೈಕ ಸ್ಥಳ ಮಂಗಳೂರು ಆಗಿದ್ದು, ಇದೊಂದು ಅಪೂರ್ವ ಅವಕಾಶ ಎಂದು ಹೇಳಿದರು. ಹೆಚ್ಚಿನ ಭಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸುವಂತೆ ಕೋರಿದರು.
ಸ್ವಾಮಿನಿ ಮಂಗಳಾಮೃತ ಪ್ರಾಣ ಆಶೀರ್ವಚನ ನೀಡುತ್ತಾ, ಕಳೆದ ಏಳು ವರ್ಷಗಳಿಂದ ಅಮ್ಮನವರ ಭೇಟಿ ನಿರೀಕ್ಷಿಸಿದ್ದ ಭಕ್ತರಿಗೆ ಇದೊಂದು ಮಹತ್ವದ ಅವಕಾಶ ಎಂದು ತಿಳಿಸಿದರು. ಗೌರವಾಧ್ಯಕ್ಷ ಡಾ. ವಸಂತ ಕುಮಾರ್ ಪೆರ್ಲ ಕಾರ್ಯಕ್ರಮ ನಿರೂಪಿಸಿ ಕಾರ್ಯಕ್ರಮದ ವಿವರಗಳನ್ನು ನೀಡಿದರು. ಈ ಸಂದರ್ಭದಲ್ಲಿ ಗುತ್ತಿಗೆದಾರ ಭಾಸ್ಕರ್ ಭಟ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಸಿ.ಎ. ವಾಮನ್ ಕಾಮತ್, ಮುರಳೀಧರ್ ಶೆಟ್ಟಿ, ವಾಮನ್ ಮೈಂದನ್, ಚಂದ್ರಹಾಸ್ ಸುವರ್ಣ, ಗಣೇಶ್ ಕೆ., ಕೃಷ್ಣಶೆಟ್ಟಿ, ಅಡ್ವೊಕೇಟ್ ಪುಷ್ಪಲತಾ, ಅಮೃತ ವಿದ್ಯಾಲಯಂ ಪ್ರಾಂಶುಪಾಲೆ ಮಧುಲಿಖಾ ರಾವ್ ಸೇರಿದಂತೆ ಸೇವಾ ಸಮಿತಿಯ ಪದಾಧಿಕಾರಿಗಳು, ಅಯುಧ್ ಮಂಗಳೂರು ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು


