Friday, March 13, 2026
Flats for sale
Homeಜಿಲ್ಲೆಮಂಗಳೂರು : ಮೊಂಟೆ ಪದವು ಹಿತ್ತಿಲಕೋಡಿ ಕೊಪ್ಪಳದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ- 2...

ಮಂಗಳೂರು : ಮೊಂಟೆ ಪದವು ಹಿತ್ತಿಲಕೋಡಿ ಕೊಪ್ಪಳದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ- 2 ಮೊಮ್ಮಕಳು ಸಾವು,ತಾಯಿಯ ರಕ್ಷಣೆ …!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರೆಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಒಟ್ಟು ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾತ್ತು ಆದರೆ ಆಸ್ಪತ್ರೆಯಲ್ಲಿ ಮಗು ಮೃತಪಟ್ಟಿದೆ.

ಮಂಜಾನಾಡಿ ಗ್ರಾಮದ ಮದಪಾಡಿಯ ಮೊಂಟೆಪದವು ಕೋಡಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿತ ಪ್ರಕರಣದಲ್ಲಿ ಒಟ್ಟು ಮೂವರು ಸಾವನ್ನಪ್ಪಿದ್ದಾರೆ. ಮುಂದುವರೆದ ಕಾರ್ಯಾಚರಣೆಯಲ್ಲಿ ತಾಯಿ ಹಾಗೂ ಮಗುವನ್ನು ರಕ್ಷಿಸಿದ್ದರು ಆದರೆ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ .

ಅವಶೇಷದಡಿ ಸಿಲುಕಿ ಅಜ್ಜಿ ಪ್ರೇಮ (58) ಆರ್ಯನ್ (3) ರಕ್ಷಣಾ ಕಾರ್ಯಚರಣೆಯ ಬಳಿಕ ಆಸ್ಪತ್ರೆಯಲ್ಲಿ ಮಗು ಆಯುಷ್ (2) ಸಾವು. ಮಗುವಿನ ತಾಯಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು ಮಳೆ ಹಾಗೂ ಇಕ್ಕಟ್ಟಿನ ಜಾಗವಾದ ಹಿನ್ನೆಲೆ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿತ್ತು.ಆದರೆ ರಕ್ಷಣಾ ತಂಡ ಹರಸಾಹಸ ಪಟ್ಟು ಪುಟ್ಟ ಮಗುವನ್ನು ರಕ್ಷಿಸಿದರು ಮಗು ಬದುಕುಳಿಯಲಿಲ್ಲ.

RELATED ARTICLES

LEAVE A REPLY

Please enter your comment!
Please enter your name here

Most Popular