ಮಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ಬೆಲೆ ಏರಿಕೆಯ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಪಾದಯಾತ್ರೆ ಮಂಗಳೂರಿನಲ್ಲಿ ನಡೆಯಿತು.






ಮಂಗಳೂರಿನ ಅಂಬೆಡ್ಕರ್ ವೃತ್ತದಿಂದ ಕ್ಲಾಕ್ ಟವರ್ ತನಕ ಬೃಹತ್ ಪಾದಯಾತ್ರೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದು, ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಬೆಲೆ ಏರಿಕೆ, ದಲಿತ ಹಣಲೂಟಿ , ಹಿಂದೂ ವಿರೋಧಿ ನೀತಿ , ರೈತರ ನಿರ್ಲಕ್ಷ ಮೊದಲಾದ ವಿಚಾರಗಳನ್ನು ಮುಂದಿಟ್ಟು ಈ ಜನಾಕ್ರೋಶ ಯಾತ್ರೆಯನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಇಂದು ಮಂಗಳೂರಿಗೆ ಈ ಯಾತ್ರೆ ಆಗಮಿಸಿದ್ದು, ರಾಜ್ಯದ ಹಲವು ಬಿಜೆಪಿ ನಾಯಕರು ಈ ಆಕ್ರೋಶ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಸಭೆಯನ್ನೂ ಆಯೋಜಿಸಲಾಗಿದ್ದು, ಸರ್ಕಾರದ ದುರಾಡಳಿತವನ್ನು ಜನರಿಗೆ ಮುಟ್ಟಿಸಲಿದ್ದಾರೆ.ಈ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ,ಮಾಜಿ ಸಚಿವ ಶ್ರೀ ರಾಮುಲು ಹಾಗೂ ಇನ್ನಿತರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.


