Thursday, March 12, 2026
Flats for sale
Homeಜಿಲ್ಲೆಮಂಗಳೂರು : ರೆಡ್ ಅಲರ್ಟ್ ಹಿನ್ನಲೆ ಕರಾವಳಿಯಾದ್ಯಂತ ಬಾರಿ ಮಳೆ,ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಮಂಗಳೂರು : ರೆಡ್ ಅಲರ್ಟ್ ಹಿನ್ನಲೆ ಕರಾವಳಿಯಾದ್ಯಂತ ಬಾರಿ ಮಳೆ,ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ‌ ರೆಡ್ ಅಲರ್ಟ್ ಹಿನ್ನಲೆ ಭಾರೀ ಮಳೆ ಸಾಧ್ಯತೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಹಾಗೂ ಉಡುಪಿಯ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ ,ಹಾಗೂ ಪದವಿಪೂರ್ವ,ಐ.ಟಿ.ಐ ಕಾಲೇಜು ಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪುಗೊಂಡಿದೆ. ಹೀಗಾಗಿ ಕರ್ನಾಟಕದಲ್ಲೂ ಹೆಚ್ಚು ಮಳೆ ಯಾಗುತ್ತಿದೆ. ಇಂದು ಐದು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಮೈಸೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ಬೀದರ್, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, ಬೆಳಗಾವಿ, ಹಾವೇರಿ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ರಾಮನಗರ, ವಿಜಯನಗರ, ತುಮಕೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳದಲ್ಲಿ ಕೂಡ ಮಳೆಯಾಗಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular