Saturday, September 19, 2026
Homeಕ್ರೈಂಮಂಗಳೂರು : ರೆಹಮಾನ್ ಕೊಲೆ ಪ್ರಕರಣ : ಆರೋಪಿಗಳಿಗೆ ಕೋಕಾ, 6 ಮಂದಿಗೆ ಗೂಂಡಾ ಕಾಯ್ದೆ.

ಮಂಗಳೂರು : ರೆಹಮಾನ್ ಕೊಲೆ ಪ್ರಕರಣ : ಆರೋಪಿಗಳಿಗೆ ಕೋಕಾ, 6 ಮಂದಿಗೆ ಗೂಂಡಾ ಕಾಯ್ದೆ.

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ 54/2025ರ ರೆಹಮಾನ್ ಕೊಲೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಮಹತ್ವದ ಕಾನೂನು ಕ್ರಮ ಕೈಗೊಂಡಿದೆ.

ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ (ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಅಡಿಯಲ್ಲಿ ಕ್ರಮ ಜರುಗಿಸಲಾಗಿದೆ. ಸಂಘಟಿತ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಈ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳಲಾಗಿದೆ.

ಗೂಂಡಾ ಕಾಯ್ದೆ ಅಳವಡಿಸಲಾಗಿರುವ ಆರೋಪಿಗಳ ವಿವರ :

ಭರತ್ ಕುಮ್ಡೇಲು – 38 ವರ್ಷ
ಶಿವಪ್ರಸಾದ್ – 33 ವರ್ಷ
ಪ್ರದೀಪ್ – 34 ವರ್ಷ
ಅಭಿನ್ ರೈ – 32 ವರ್ಷ
ತೇಜಾಕ್ಷ – 24 ವರ್ಷ
ರಂಜಿತ್ – 35 ವರ್ಷ

ಈ ಮೂಲಕ ರೆಹಮಾನ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಪ್ರಕರಣದ ತನಿಖೆ ಹಾಗೂ ಮುಂದಿನ ಕಾನೂನು ಪ್ರಕ್ರಿಯೆಗಳು ಸಂಬಂಧಪಟ್ಟ ಕಾನೂನು ನಿಯಮಗಳಂತೆ ಮುಂದುವರಿಯಲಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular