Tuesday, September 15, 2026
Homeಜಿಲ್ಲೆಮಂಗಳೂರು : ಲಾಲ್‌ಬಾಗ್‌ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ,ಆಸ್ಪತ್ರೆಗೆ ದಾಖಲು.

ಮಂಗಳೂರು : ಲಾಲ್‌ಬಾಗ್‌ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ,ಆಸ್ಪತ್ರೆಗೆ ದಾಖಲು.

ಮಂಗಳೂರು : ಮಂಗಳೂರು ನಗರದ ಲಾಲ್‌ಬಾಗ್ ಸಮೀಪ ಶನಿವಾರ ಯುವಕನೊಬ್ಬನ ಮೇಲೆ ಅಪರಿಚಿತ ವ್ಯಕ್ತಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

Oplus_131072

ಪ್ರಾಥಮಿಕ ಮಾಹಿತಿಯಂತೆ, ಗಾಯಾಳುವನ್ನು ವಿಕ್ಕಿ ಬಪ್ಪಾಲ್ ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಸುಮಾರು 1:45 ಗಂಟೆಗೆ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಮತ್ತೊಂದು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ಅಪರಿಚಿತ ವ್ಯಕ್ತಿ ಏಕಾಏಕಿ ಮಾರಕಾಸ್ತ್ರದಿಂದ ಕುತ್ತಿಗೆಯ ಭಾಗಕ್ಕೆ ದಾಳಿ ನಡೆಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದಾಳಿಯಲ್ಲಿ ವಿಕ್ಕಿ ಬಪ್ಪಾಲ್ ರವರ ಕುತ್ತಿಗೆಯ ಸಮೀಪ ಆಳವಾದ ಗಾಯವಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಲು ನಗರದಾದ್ಯಂತ ಚೆಕ್‌ಪೋಸ್ಟ್‌ಗಳಿಗೆ ಎಚ್ಚರಿಕೆ ನೀಡಲಾಗಿದ್ದು, ತೀವ್ರ ಶೋಧ ಕಾರ್ಯ ಆರಂಭಿಸಲಾಗಿದೆ.

ಈ ಸಂಬಂಧ ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಲಿದ್ದು, ಪೂರ್ವ ಉಪವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ತನಿಖೆ ನಡೆಸಲಿದ್ದಾರೆ.

ದಾಳಿಗೆ ಒಳಗಾದ ವ್ಯಕ್ತಿ ರೌಡಿ ಶೀಟರ್ ಆಗಿದ್ದು, ಮಾದಕ ವಸ್ತುಗಳ ಮಾರಾಟ (ಡ್ರಗ್ ಪೆಡ್ಲಿಂಗ್) ಆರೋಪದ ಹಿನ್ನೆಲೆಯಲ್ಲಿ ಪೊಲೀಸರ ನಿಗಾದಲ್ಲಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದಾಳಿಯ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹಳೆಯ ವೈಷಮ್ಯ ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ದಾಳಿ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದಿರುವ ಸಾಧ್ಯತೆ ಎಂದು ತಿಳಿದಿದೆ. ಈತನ ವಿರುದ್ಧ ಪ್ರಸ್ತುತ ಹಲ್ಲೆ ಹಾಗೂ ಎನ್‌ಡಿಪಿಎಸ್ (ಮಾದಕ ದ್ರವ್ಯ) ಪ್ರಕರಣಗಳು ಸೇರಿದಂತೆ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಇದಲ್ಲದೆ, ಈ ಹಿಂದೆ ದಾಖಲಾಗಿದ್ದ ಇನ್ನೂ 6 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಖುಲಾಸೆಯಾಗಿದ್ದನು. ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular