ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಅಬ್ದುಲ್ ರಹಿಮಾನ್ನನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಬಂಧಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ಕತಾರ್ನಲ್ಲಿ ತಲೆಮರೆಸಿಕೊಂಡಿದ್ದನು. ಬೇರೆ ರಾಜ್ಯಗಳಲ್ಲಿ ಬಂದಿಳಿದರೆ ಗೊತ್ತಾಗೋದಿಲ್ಲ ಎಂಬ ಧೈರ್ಯದಿಂದ ಆರೋಪಿ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದನು ಆದರೆ ಶುಕ್ರವಾರ (ಜು.04) ಕತಾರ್ನಿಂದ ಕೇರಳಕ್ಕೆ ಬರುತ್ತಿದ ವೇಳೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದನು. ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದನು. ಹೀಗಾಗಿ, ಎನ್ಐಎ ಅಧಿಕಾರಿಗಳು ಅಬ್ದುಲ್ ರಹಿಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ನಾಲ್ಕು ಲಕ್ಷ ಬಹುಮಾನ ಕೊಡುವುದಾಗಿ ಘೋಷಿಸಿದ್ದರು.ಆರೋಪಿಗಳ ಪತ್ತೆಗೆ ಜಾಡು ಹಿಡಿದ (NIA) ಲುಕ್ ಔಟ್ ನೋಟೀಸ್ ಜಾರಿ ಮಾಡಿತ್ತು ಆದರೆ ಆತನ ಬಗ್ಗೆ ಮಾಹಿತಿ ಪಡೆಯುತ್ತಿರುವ ಅಧಿಕಾರಿಗಳು ಇಂದು ಬಂದಿಳಿಯುತ್ತಿದ್ದಂತೆ ಬಂಧಿಸಿದ್ದಾರೆ.