ಮಂಗಳೂರು : ಅಕ್ಟೋಬರ್ 24 ರಂದು ನಡೆಯಲಿರುವ ಪರಿಷತ್ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ ಗೊಳಿಸಿದೆ. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿ ನಿರ್ವಹಿಸಿದ್ದರು. ಬಳಿಕ ಪಕ್ಷದಲ್ಲಿ ವಿವಿಧ ಜವಾಬ್ದಾರಿ ವಹಿಸಿಕೊಂಡಿದ್ದ ಕಿಶೋರ್ ಕುಮಾರ್ ಪಕ್ಷ ಕಟ್ಟುವಲ್ಲಿ ಶ್ರಮ ವಹಿಸಿದ್ದರು.

ಇತ್ತೀಚೆಗೆ ವಿಧಾನಸಭಾ ಚುನಾವಣಾ ಸಮಯದಲ್ಲೂ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕಿಶೋರ್ ಕುಮಾರ್ ಗೆ ಸಿಗಲಿದೆ ಎಂಬ ಸುದ್ದಿ ಹರಡಿತ್ತು. ಆದ್ರೆ ಇದೀಗ ಇವರ ಪರಿಶ್ರಮವನ್ನು ಗುರುತಿಸಿದ ಪಕ್ಷ ವಿಧಾನ ಪರಿಷತ್ ಉಪ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಹೆಸರು ಘೋಷಣೆ ಮಾಡಿದೆ.


