Sunday, July 19, 2026
Homeಜಿಲ್ಲೆಮಂಗಳೂರು : ವಿಹೆಚ್​ಪಿ ಮುಖಂಡರು ಶರಣ್​ ಪಂಪ್ವೆಲ್​, ಭರತ್ ಕುಮ್ಡೇಲ್​​ಗೆ ಜೀವ ಬೆದರಿಕೆ : ಪೊಲೀಸರಿಂದ...

ಮಂಗಳೂರು : ವಿಹೆಚ್​ಪಿ ಮುಖಂಡರು ಶರಣ್​ ಪಂಪ್ವೆಲ್​, ಭರತ್ ಕುಮ್ಡೇಲ್​​ಗೆ ಜೀವ ಬೆದರಿಕೆ : ಪೊಲೀಸರಿಂದ ಪ್ರಕರಣ ದಾಖಲು..!

ಮಂಗಳೂರು : ಮಂಗಳೂರಿನ ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಗಿರುವ ಸಂದರ್ಭದಲ್ಲೇ ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಿಶ್ಚಿತತೆ ಸೃಷ್ಟಿಸಿವೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭಾರತ್ ಕುಮ್ಡೇಲ್ ಎಂಬ ಬರಹವುಳ್ಳ ಸಂದೇಶಗಳು ಸಾಮಾಜಿಕ ಮಾಧ್ಯಮಗಳಾಗಿ ಹರಿದಾಡಿದ್ದವು.

ಕೆಲ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. ‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್’’ ಎಂದು ಪೋಸ್ಟ್ ಮಾಡಿದ್ದರು. ಅದರಂತೆಯೇ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್​ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್​ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು ಬಿಎನ್​ಎಸ್ ಕಾಯ್ದೆ 351(4) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.

ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಹತ್ಯೆ ಬೆದರಿಕೆ ಸಂದೇಶ ವಿಚಾರವಾಗಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಎನ್​ಎಸ್ ಕಾಯ್ದೆ 196(1)(C), 353(2) ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ. ‘‘ಅಶ್ರಫ್ ಕೊಂದ ಭರತ್​ನನ್ನು ಮರೆತಿಲ್ಲ ಎಂದು ಕಿಡಿಗೇಡಿಗಳು ಪೋಸ್ಟ್ ಹಾಕಿದ್ದರು. ‘‘Wait and watch’’ ಎಂದು ತಲ್ವಾರ್ ಫೋಟೋ ಪೋಸ್ಟ್ ಮಾಡಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ೨ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular