ಮಂಗಳೂರು : ಕಂಬಳ ಪ್ರಿಯ ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಪುತ್ರ ಯುವ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಉದ್ಯಮಿಯನ್ನು ಅಭಿಷೇಕ್ ಎಂದು ತಿಳಿದುಬಂದಿದೆ.
ನವೆಂಬರ್ 5ರ ರಾತ್ರಿ ನಾಪತ್ತೆಯಾಗಿದ್ದ ಅಭಿಷೇಕ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು,ಆತನ ಕಾರು,ಮೊಬೈಲ್ ಹಾಗೂ ವಾಚ್ ಸ್ಥಳದಲ್ಲಿ ಪತ್ತೆಯಾಗಿತ್ತು. ಇದೀಗ ಬಪ್ಪನಾಡು ಸಮೀಪದ ಶಾಂಭವಿ ನದಿ ತೀರದಲ್ಲಿ ಅಭಿಷೇಕ್ ಅವರ ಮೃತದೇಹ ಪತ್ತೆಯಾಗಿದೆ. ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನು ಸ್ಥಳೀಯರು ಗುರುತಿಸಿ ಪೊಲೀಸ್‌ಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಿಂದ ಸ್ಥಳೀಯ ಸಮುದಾಯದಲ್ಲಿ ಆಘಾತ ಮತ್ತು ಶೋಕ ಉಂಟಾಗಿದೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧಿಸಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಯ ಶಂಕೆಯ ಮೇಲೆ ತನಿಖೆ ಆರಂಭವಾಗಿದೆ.


