Friday, March 13, 2026
Flats for sale
Homeಜಿಲ್ಲೆಮಂಗಳೂರು : ಸಮಾಜ ಸೇವಾ ಸಹಕಾರಿ ಸಂಘದಲ್ಲಿ 500 ನಕಲಿ ಚಿನ್ನದ ಬಳೆ ಅಡವಿಟ್ಟು 2...

ಮಂಗಳೂರು : ಸಮಾಜ ಸೇವಾ ಸಹಕಾರಿ ಸಂಘದಲ್ಲಿ 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಸಾಲ ,ಮಾಜಿ ನಿರ್ದೇಶಕರಿಂದ ದೂರು ..!

ಮಂಗಳೂರು : ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಅಬೂಬಕ್ಕರ್ ಸಿದ್ದಿಕ್ 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಅಬೂಬಕ್ಕರ್​ ಸಿದ್ದಿಕ್​, ಬ್ಯಾಂಕ್ ಆಡಳಿತ ಮಂಡಳಿ ಮತ್ತು ನೌಕರರ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲ್ಲಿ ಎಲ್ಲರಿಗೂ ಕಾಡುವ ಪ್ರಶ್ನೆಯೆಂದರೆ 500 ನಕಲಿ ಚಿನ್ನಾಭರಣವನ್ನು ತಪಾಸಣೆ ಮಾಡದೇ ಈ ಕಾರ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಬ್ಯಾಂಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ವಂಚನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಂಗಳೂರಿನ ಪಡೀಲ್​ನ ಶಾಖೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ ಎಂಬ ಆರೋಪ ಕೇಳಿಬಂದಿದೆ. ಚಿನ್ನ ಪರೀಕ್ಷೆ ನಡೆಸುವ ಸರಪ, ಬ್ಯಾಂಕ್​ನ ಅಧ್ಯಕ್ಷ, ನಿರ್ದೇಶಕರು ಮ್ಯಾನೇಜರ್, ಸಿಬ್ಬಂದಿ ಸಹಕಾರದಿಂದ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಈ ಬಗ್ಗೆ ಬ್ಯಾಂಕ್​ನ ಸದಸ್ಯರು, ಮಾಜಿ ನಿರ್ದೇಶಕ ಡಿ.ಲೋಕನಾಥ್ ದೂರಿನ ಮೇರೆಗೆ 28 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಬ್ಯಾಂಕ್​ನ ಸರಪ ವಿವೇಕ್ ಆಚಾರ್ಯನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿ ಅಬೂಬಕ್ಕರ್ ಸಿದ್ದಿಕ್​ಗಾಗಿ ಹುಡುಕಾಟ ಮುಂದುವರೆದಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಅಬೂಬಕ್ಕರ್ ಸಿದ್ದಿಕ್ ಮೊದಲಿನಿಂದಲೂ ಬ್ಯಾಂಕ್​ನ ಗ್ರಾಹಕರಾಗಿದ್ದರು. 2023ರ ನವೆಂಬರ್ ತಿಂಗಳಿನಲ್ಲಿ ಒಂದೇ ರೀತಿಯ 500 ನಕಲಿ ಚಿನ್ನದ ಬಳೆ ಅಡವಿಟ್ಟು, ಸಾಲ ಪಡೆದಿದ್ದಾರೆ. ಸಾಲವನ್ನು ಮೂರು ತಿಂಗಳಲ್ಲಿ ತೀರಿಸಬೇಕಿತ್ತು ಎಂದು ಹೇಳಿದರು.ಸಾಲ ತೀರಸದೆ ಇದ್ದಾಗ, ಬ್ಯಾಂಕ್​ನ ಪ್ರಭಾರ ಮ್ಯಾನೇಜರ್​ ಅವರು ಅನುಮಾನಗೊಂಡು ಬೇರೆಯವರಿಂದ ಮರು ತಪಾಸಣೆ ನಡೆಸಿದಾಗ ಚಿನ್ನ ನಕಲಿ ಎಂದು ಗೊತ್ತಾಗಿದೆ. ತಕ್ಷಣ ಜನರಲ್ ಮ್ಯಾನೇಜರ್ ಸರಫ್​ ಅವರಿಗೆ ಪತ್ರ ಬರೆದಿದ್ದಾರೆ. ಸರಿಯಾಗಿ ಚಿನ್ನವನ್ನು ಪರೀಕ್ಷೆ ಮಾಡದ ಕಾರಣ ಬ್ಯಾಂಕ್​ಗೆ 2 ಕೋಟಿ ರೂಪಾಯಿಗೂ ಅಧಿಕ ನಷ್ಟ ಆಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular