Sunday, September 20, 2026
Homeಜಿಲ್ಲೆಮಂಗಳೂರು : ಸಾಣೂರು ಜಂಕ್ಷನ್‌ನಲ್ಲಿ ಭೀಕರ ರಸ್ತೆ ಅಪಘಾತ : ಮಾಜಿ ಸಚಿವ ರಮಾನಾಥ ರೈ...

ಮಂಗಳೂರು : ಸಾಣೂರು ಜಂಕ್ಷನ್‌ನಲ್ಲಿ ಭೀಕರ ರಸ್ತೆ ಅಪಘಾತ : ಮಾಜಿ ಸಚಿವ ರಮಾನಾಥ ರೈ ಸೇರಿ ಹಲವರಿಗೆ ಗಾಯ.

ಮೂಡುಬಿದ್ರೆ : ಕಾರ್ಕಳ–ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ರಮಾನಾಥ ರೈ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಕಾರ್ಕಳದಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿನ ನಡುವೆ ಸಾಣೂರು ಜಂಕ್ಷನ್‌ನಲ್ಲಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕಾರಿಗೆ ಹಾನಿಯಾಗಿದ್ದು, ರಮಾನಾಥ ರೈ ಅವರನ್ನು ಸ್ಥಳೀಯರು ಹರಸಾಹಸಪಟ್ಟು ಕಾರಿನಿಂದ ಹೊರತೆಗೆದಿದ್ದಾರೆ. ಬಳಿಕ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್‌ನಲ್ಲಿದ್ದ ಹಾಗೂ ಕಾರಿನಲ್ಲಿದ್ದ ಹಲವು ಪ್ರಯಾಣಿಕರಿಗೂ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಹಾಗೂ ಗಾಯಾಳುಗಳ ಆರೋಗ್ಯ ಸ್ಥಿತಿಗತಿ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular