ಮಂಗಳೂರು : ಗುರುಪುರ ಕೈಕಂಬದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಪರಸ್ಪರ ಅವಾಚ್ಯ ಶಬ್ಧಗಳಿಂದ ನಿಂದಿಸಿ ಮುಷ್ಟಿಯಲ್ಲಿದ್ದ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಂಧಿತ ಆರೋಪಿಗಳನ್ನು ಬಂಟ್ವಾಳದ ತೆಂಕ ಬೆಳ್ಳೂರು ನಿವಾಸಿ ಶಿವಪ್ರಸಾದ್ (39) ಮತ್ತು ಶಕ್ತಿನಗರ ಕಾರ್ಮಿಕ ಕಾಲೋನಿಯ ಶದ್ರಕ್ ಇಮ್ಯಾನುವೆಲ್ ಅಲಿಯಾಸ್ ಮನು (39) ಎಂದು ಗುರುತಿಸಲಾಗಿದೆ. ಈ ಘಟನೆ ಸೋಮವಾರ ಆಗಸ್ಟ್ 22 ರಂದು ಸಂಭವಿಸಿದೆ. ಹೊಯ್ಸಳ ವಾಹನದಲ್ಲಿ ಗಸ್ತು ತಿರುಗುತ್ತಿದ್ದ ಬಜ್ಪೆ ಪೊಲೀಸರು, ಗದ್ದಲದ ಬಗ್ಗೆ ಮಾಹಿತಿ ಪಡೆದ, ಸ್ಥಳಕ್ಕೆ ಆಗಮಿಸಿ ಇಬ್ಬರನ್ನೂ ಠಾಣೆಗೆ ಕರೆದೊಯ್ದರು. ತಪ್ಪಿತಸ್ಥರ ವಿರುದ್ಧ ಸಾರ್ವಜನಿಕ ತೊಂದರೆಗೆ ಯತ್ನಿಸಿದ ಪ್ರಕರಣ ದಾಖಲಿಸಲಾಗಿದೆ.