ಮಂಗಳೂರು : NDA ಸರಕಾರದ ಬಜೆಟ್ ಅಮೃತಕಾಲದ ಬಜೆಟ್ ಅಭಿವೃದ್ಧಿ ಪರ ವಿಕಸಿತ ಪರಿಕಲ್ಪನೆಯ ಬಜೆಟ್ ಎಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ,ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರು ಇಂದು ಬಿಜೆಪಿ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ರವರನ್ನು ಶ್ಲಾಘಿಸಿ ಮಾತನಾಡಿದ ಅವರು 53.ಲಕ್ಷ ಕೋಟೆಯ ಬಜೆಟ್ ಇದಾಗಿದ್ದು ಈ ಬಾರಿಯ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿ ಗೆ ಆದ್ಯತೆಯಾಗಿದೆ,ಕೇಂದ್ರ ದ ಯೋಜನೆಯಿಂದಾಗಿ ಬಡತನ ಪ್ರಮಾಣ ಇಳಿಖೆಯಾಗಿದೆ.GST ಸರಳಿಕರಣ,ಬಯೋಫಾರಂ ಹಬ್ ಗೆ 10 ಲಕ್ಷ ಕೋಟಿ,ಉದ್ಯೋಗ ,ಕೃಷಿಗೆ ಆದ್ಯತೆ. ಹಾಗೂ 2047 ಕ್ಕೆ ವಿಕಸಿತ ಭಾರತದ ಕಡೆಗೆ ಹೆಜ್ಜೆಯ ಬಜೆಟ್ ಆಗಿದೆ ಎಂದರು.ಈ ಬಾರಿ ಆತ್ಮನಿರ್ಭರ ಭಾರತಕ್ಕೆ ಅತಿ ಹೆಚ್ಚು ಅನುದಾನ ನೀಡಿದ್ದು , ಮೆಡಿಕಲ್ ಹಬ್ ಘೋಷಣೆಯಿಂದ ಮೆಡಿಕಲ್ ಟೂರಿಸಂ ಗೆ ಆದ್ಯತೆ ನೀಡಲಾಗಿದೆ ಎಂದರು.
ಸಿದ್ದರಾಮಯ್ಯ ಸರಕಾರ ದಿವಾಳಿ ಸ್ಥಾನಕ್ಕೆ ತಲುಪುವುದರಲ್ಲಿ ಹೆಚ್ಚು ಸಮಯವಿಲ್ಲ.ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಎಲ್ಲ ನೀಡಿದೆ ಆದರೆ ರಾಜ್ಯ ಸರಕಾರ ಅವನ್ನೆಲ್ಲ ಗ್ಯಾರಂಟಿ ಯೋಜನೆಗೆ ಬಳಸಿ ಖಜಾನೆಯನ್ನು ಬರಿದಾಗಿಸಿದೆ ಎಂದು ಹೇಳಿದರು. ಕಳೆದ ಬಾರಿ ಪತ್ರಿಕಾಗೋಷ್ಠಿ ನಡೆಸಿದ ವಿತ್ತ ಸಚಿವೆ ನಿರ್ಮಲ ಸಿತಾರಾಮ್ ರವರ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಕೊಡಲಿಲ್ಲ, ಜಿಎಸ್.ಟಿ ಸಭೆಗಳಲ್ಲಿ ಯಾಕೆ ಮಾತನಾಡುವುದಿಲ್ಲ,ಸಭೆಗಳಲ್ಲಿ ಯಾಕೆ ಭಾಗವಹಿಸುವುದಿಲ್ಲ ಎಂದು ಪ್ರಶ್ನಿಸಿದರು.
ಕರ್ನಾಟಕ ರಾಜ್ಯದಲ್ಲಿ ಕೃಷಿ, ರೈಲ್ವೆ, ಮೀನುಗಾರಿಕೆ, ಮಹಿಳಾ ಸ್ವಸಹಾಯ ಸಂಘ, ಕೌಡ್ ಸೆಂಟರ್ ಸ್ಥಾಪನೆ, ಜಲಸಾರಿಗೆ ಸಹಿತ ವಿವಿಧ ಕ್ಷೇತ್ರಗಳಿಗೆ ಕೇಂದ್ರದ ಬಜೆಟಿನಿಂದ ಪ್ರಯೋಜನವಾಗಿದೆ.ಬೆಂಗಳೂರಿಗೆ 5000 ರೂ ಕೋಟಿ ರೂ ವಿಶೇಷ ಅನುದಾನ ನೀಡಿದೆ, ದೇಶದ ಆರ್ಥಿಕಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪ್ರಮುಖ ನಗರಗಳ ಅಭಿವೃದ್ಧಿಗಾಗಿ ನಗರ ಆರ್ಥಿಕ ವಲಯ ಯೋಜನೆಯನ್ನು ಆರಂಭಿಸಲಾಗಿದೆ. ಈ ಯೋಜನೆಯಲ್ಲಿ ಬೆಂಗಳೂರನ್ನು ಕೂಡ ಸೇರಿಸಲಾಗಿದೆ. ಇದಕ್ಕಾಗಿ ಐದು ವರ್ಷಗಳಲ್ಲಿ ಐದು ಸಾವಿರ ಕೋಟಿ ರೂಪಾಯಿಗಳನ್ನು ಬೆಂಗಳೂರಿಗೆ ನೀಡಲಾಗುತ್ತದೆ ಎಂದರು.
ಕೇಂದ್ರ ಬಜೆಟ್ 2026-27 ರಲ್ಲಿ ಮೀನುಗಾರಿಕಾ ಕ್ಷೇತ್ರಕ್ಕೆ ಇದುವರೆಗಿನ ಅತ್ಯಧಿಕ ವಾರ್ಷಿಕ ಅನುದಾನವಾಗಿ 2,761.80 ಕೋಟಿ ಮೀಸಲಿಡಲಾಗಿದೆ. ಇದರಿಂದ ಕರಾವಳಿ ಹಾಗೂ ಒಳನಾಡು ಮೀನುಗಾರಿಕೆಯನ್ನು ಬಲಪಡಿಸುವುದು, ರಫ್ತು ಹೆಚ್ಚಿಸುವುದು ಮತ್ತು ಮೀನುಗಾರರು ಹಾಗೂ ಮೀನು ಸಾಕಾಣಿಕೆದಾರರ ಜೀವನೋಪಾಯವನ್ನು ಸುಧಾರಿಸುವುದರ ಮೇಲೆ ಸರಕಾರದ ಒತ್ತಾಸ ಸ್ಪಷ್ಟವಾಗಿದೆ. ಒಟ್ಟು ಅನುದಾನದಲ್ಲಿ 2,530 ಕೋಟಿ ರೂಪಾಯಿ ಯೋಜನಾ ಆಧಾರಿತ ಕ್ರಮಗಳಿಗೆ ಮೀಸಲಾಗಿದ್ದು, ಪ್ರಧಾನ ಮಂತ್ರಿ ಮತ್ಸಸಂಪದಾ ಯೋಜನೆಯಿಂದ 2026-27ಕ್ಕೆ 2500 ಕೋಟಿ ರೂ ಅನುದಾನವನ್ನು ಪಡೆದಿದೆ. ಕರಾವಳಿ ಪ್ರದೇಶಗಳಲ್ಲಿ ಮೀನುಗಾರಿಕಾ ಮೌಲ್ಯ ಸರಪಳಿಯನ್ನು ಬಲಪಡಿಸುವ ಉದ್ದೇಶದಿಂದ 500 ಜಲಾಶಯಗಳು ಮತ್ತು ಅಮೃತ್ ಸರೋವರಗಳ ಏಕೀಕೃತ ಅಭಿವೃದ್ಧಿಗೆ ಹಾಕಿರುವ ಯೋಜನೆಯಡಿಯಲ್ಲಿ ಸ್ಪಾರ್ಟ್ ಅಪ್ ಗಳು, ಮಹಿಳಾ ನೇತೃತ್ವದ ಗುಂಪುಗಳು ಹಾಗೂ ಮೀನುಗಾರರ ಉತ್ಪಾದಕ ಸಂಸ್ಥೆಗಳು ಭಾಗವಹಿಸುವ ಮೂಲಕ ಮಾರುಕಟ್ಟೆ ಸಂಪರ್ಕವನ್ನು ಸುಧಾರಿಸುವ ಕ್ರಮ ಕೈಗೊಳ್ಳಲಾಗಿದೆ,ಜೊತೆಗೆ ತೆಂಗು, ಶ್ರೀಗಂಧ, ರೇಷ್ಮೆ ಬೆಳೆಯಲ್ಲಿ ಕರ್ನಾಟಕ ದೇಶದಲ್ಲಿಯೇ ನಂಬರ್ 1 ಸ್ಥಾನದಲ್ಲಿದೆ. ಗೋಡಂಬಿ ಉತ್ಪಾದನೆಯಲ್ಲಿ ಟಾಪ್ 5 ನೇ ಸ್ಥಾನದಲ್ಲಿದೆ ಎಂದು ಹೇಳಿದರು.


