Tuesday, October 21, 2025
Flats for sale
Homeಜಿಲ್ಲೆಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ: ಇನ್ನೋವಾ ಕಾರಿನಲ್ಲಿ ಮಾದಕ ದ್ರವ್ಯ, ಎಂಡಿಎಂಎ ಮಾರಾಟ ಮಾಡುತ್ತಿದ್ದ...

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ: ಇನ್ನೋವಾ ಕಾರಿನಲ್ಲಿ ಮಾದಕ ದ್ರವ್ಯ, ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಬಂಧನ…!

ಮಂಗಳೂರು ; ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸುರತ್ಕಲ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 10 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖಾಸಗಿ ಬಸ್ಸಿನಲ್ಲಿ ಪಾರ್ಸೆಲ್ ಮೂಲಕ ಸಾಗಾಟ ಮಾಡಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಇನ್ನೋವಾ ಕಾರಿನಲ್ಲಿ ಮುಕ್ಕ-ಮಾಲೆಮಾರ್ ಬೀಚ್ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು 10 ರಂದು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇನ್ನೋವಾ ಕಾರನ್ನು ಪತ್ತೆ ಹಚ್ಚಿದ್ದಾರೆ.

ಆರೋಪಿಗಳನ್ನು ಮೊಹಮ್ಮದ್ ಆಸೀಫ್(24), ಕಿನ್ಯಾ, ದೇರಳಕಟ್ಟೆ ನಿವಾಸಿ,ಅಸ್ಗರ್ ಆಲಿ(31), ಮುಕ್ಕ, ಸುರತ್ಕಲ್ ,ಮೊಹಮ್ಮದ್ ರಶೀಮ್(24), 6ನೇ ಬ್ಲಾಕ್, ಕೃಷ್ಣಾಪುರ, ಸುರತ್ಕಲ್, ಮಂಗಳೂರು ಎಂದು ತಿಳಿದಿದೆ.

ಅರೋಪಿಗಳಿಂದ ರೂ. 1 ಲಕ್ಷ ಮೌಲ್ಯದ 10 ಗ್ರಾಂ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ನಗದು ಹಣ ರೂ. 4000/-, 4 ಮೊಬೈಲ್ ಫೋನ್ ಗಳು, KA-31-N-6311 ಟೊಯೊಟಾ ಇನ್ನೋವಾ ಕಾರು ಸಹಿತ ಒಟ್ಟು ರೂ. 9,24,000/- ಮೌಲ್ಯದ ಸೊತ್ತುಗಳನ್ನು ವಶಪಡಿಸಲಾಗಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಬಸ್ ನಲ್ಲಿ ಪಾರ್ಸೆಲ್ ಮೂಲಕ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮಾಡಿಕೊಂಡು ಮಂಗಳೂರು ನಗರದಲ್ಲಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.ಆರೋಪಿಗಳ ಪೈಕಿ ಮೊಹಮ್ಮದ್ ಅಸೀಫ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟದ ಹಾಗೂ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು 2 ಪ್ರಕರಣ ದಾಖಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ರವರ ನೇತೃತ್ವದಲ್ಲಿ ಪಿಎಸ್ಐ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು ಕೈಗೊಂಡಿದ್ದರು ಎಂದು ಮಾಹಿತಿ ದೊರೆತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular