Thursday, July 23, 2026
Homeಜಿಲ್ಲೆಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಬೆಂಗಳೂರಿನಿಂದ ಮಂಗಳೂರಿಗೆ ಎಂಡಿಎಂಎ ತಂದು ಮಾರಾಟ...

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಬೆಂಗಳೂರಿನಿಂದ ಮಂಗಳೂರಿಗೆ ಎಂಡಿಎಂಎ ತಂದು ಮಾರಾಟ ಮಾಡುತ್ತಿದ್ದ ಮೂವರ ಬಂಧನ.

ಮಂಗಳೂರು ; ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿದ್ದು ಬೆಂಗಳೂರು ನಗರದಿಂದ ಮಾದಕವಸ್ತು ಎಂಡಿಎಂಎ ಅನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೂದು ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಪೋಲಿಸರು ಬಂಧಿಸಿದ್ದಾರೆ.

ಬಂಧಿತರನ್ನು ಉಳ್ಳಾಲ ನಿವಾಸಿಗಳಾದ ಮುಸ್ತಫಾ ಸೀದಿಯಬ್ಬ (34 ) ಮೈಯದ್ದಿ (28 ) ಮೊಹಮ್ಮದ್ ಶಿಫಾನ್ (28) ಎಂದು ತಿಳಿದಿದೆ.

ಆರೋಪಗಳಿಂದ ರೂ.11,90,000/- ಮೌಲ್ಯದ 118.13 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಮೊಬೈಲ್ ಫೋನ್-4, KA-19-MQ-3420 ನೇ ನಂಬ್ರದ ಬೂದು ಬಣ್ಣದ ಸ್ವೀಪ್ಟ್ ಕಾರು ಸಹಿತ ಒಟ್ಟು ರೂ. 17,95,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ದಾಖಲಾಗಿದೆ. ಈ ಮಾದಕವಸ್ತು ಮಾರಾಟ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ ಎಂದು ನಗರ ಪೋಲಿಸ್ ಆಯುಕ್ತರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular