Friday, March 13, 2026
Flats for sale
Homeಜಿಲ್ಲೆಮಂಗಳೂರು : ಸುರತ್ಕಲ್ ಹಳೆ ಟೋಲ್ ಗೇಟ್ ಬಳಿ ಸತ್ತ ಕುರಿಗಳನ್ನು ಎಸೆದು ಹೋದ ಮಾರಾಟಗಾರರು,ಎಫ್‌ಐಆರ್...

ಮಂಗಳೂರು : ಸುರತ್ಕಲ್ ಹಳೆ ಟೋಲ್ ಗೇಟ್ ಬಳಿ ಸತ್ತ ಕುರಿಗಳನ್ನು ಎಸೆದು ಹೋದ ಮಾರಾಟಗಾರರು,ಎಫ್‌ಐಆರ್ ದಾಖಲು !

ಮಂಗಳೂರು : ಸುರತ್ಕಲ್-ಮುಕ್ಕಾ ಹಳೆ ಟೋಲ್ ಗೇಟ್ ಬಳಿಯ ಸರ್ವೀಸ್ ರಸ್ತೆಯಲ್ಲಿ ಸತ್ತ ಕುರಿಗಳನ್ನು ಎಸೆದಿರುವುದು ಪತ್ತೆಯಾಗಿದೆ.

ಎರಡನೇ ವಾರ್ಡ್ ಕಾರ್ಪೊರೇಟರ್ ಶ್ವೇತಾ ಪೂಜಾರಿ ಅವರಿಗೆ ಸ್ಥಳೀಯರು ನೀಡಿದ ಮಾಹಿತಿಯಂತೆ, ಎಂಸಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಾಯದಿಂದ ಸತ್ತ ಕುರಿಗಳನ್ನು ಸುರಕ್ಷಿತ ಸ್ಥಳದಲ್ಲಿ ಹೂಳಲಾಯಿತು.

ಸುಮಾರು 15 ಸತ್ತ ಕುರಿಗಳನ್ನು ಯಾರೋ ಸುರತ್ಕಲ್ NITK ಹಳೆ ಟೋಲ್ ಗೇಟ್ ಬಳಿ ಎಸೆದು ಹೋಗಿದ್ದು, ನಿನ್ನೆ ಬೆಳಗ್ಗೆ ಸ್ಥಳೀಯರು 2 ನೇ ವಾರ್ಡ್ ನ ಕಾರ್ಪೋರೇಟರ್ ಶ್ವೇತಾ ಪೂಜಾರಿ ಇವರಿಗೆ ಮಾಹಿತಿ ನೀಡಿದ ಮೇರೆಗೆ ಅವರು ಮಹಾನಗರಪಾಲಿಕೆಯ ಅಧಿಕಾರಿ ಹಾಗೂ ಸಿಬ್ಬಂದಿ ರೊಂದಿಗೆ ಸ್ಥಳಕ್ಕೆ ಹೋಗಿ ಸತ್ತ ಕುರಿಗಳ ಮೃತ ದೇಹಗಳನ್ನು ಸುರಕ್ಷಿತ ಸ್ಥಳದಲ್ಲಿ ಧಫನ ಮಾಡಿಸಿರುತ್ತಾರೆ. ಉತ್ತರ ಕರ್ನಾಟಕದಿಂದ ಮಂಗಳೂರು ಮಾರುಕಟ್ಟೆಗೆ ಕುರಿಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ತಮ್ಮ ಊರಿಗೆ ಮರಳುತ್ತಿದ್ದಾಗ ಸತ್ತ ಕುರಿಗಳನ್ನು ಪೊದೆಗೆ ಎಸೆದಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕ ಆರೋಗ್ಯಕ್ಕೆ ಧಕ್ಕೆ ತಂದಿರುವ ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular