ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಪೋಲೀಸರ ಕಾರ್ಯಾಚರಣೆ ಚುರುಕುಗೊಂಡಿದ್ದು 24 ಗಂಟೆಯಲ್ಲಿ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ.ಪ್ರಕರಣ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿದ್ದು, ಹತ್ಯೆ ಹಿಂದೆ 20 ಜನರ ಕೈವಾಡವಿದೆ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಸುಹಾಶ್ ಶೆಟ್ಟಿ ಇದ್ದ ಕಾರ್ಗೆ ಗೂಡ್ಸ್ವಾಹನ ಗುದ್ದಿಸಿ ನಂತರ ಐದಾರು ಮಂದಿ ನಡುರಸ್ತೆಯಲ್ಲೇ ತಲ್ವಾರ್ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ನಂತರ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಬಿಟ್ಟು ಪರಾರಿಯಾಗಿದ್ದರು. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಪೊಲೀಸರು ೨೪ ಘನತೆಯ ಒಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರೆಂದು ಮಾಹಿತಿ ದೊರೆತಿದೆ.
ಪೊಲೀಸರು ವಶಕ್ಕೆ ಪಡೆದಿರುವ 8 ಶಂಕಿತ ಆರೋಪಿಗಳು ವಿಚಾರಣೆಯಲ್ಲಿ ಯಾವ ವಿಚಾರ ಬಾಯ್ಬಿಡುತ್ತಾರೆ, 2022ರಲ್ಲಿ ನಡೆದಿದ್ದ ಫಾಜಿಲ್ ಕೊಲೆಗೆ ಪ್ರತೀಕಾರವಾಗಿ ಈ ಮರ್ಡರ್ ನಡೀತಾ? ಬೇರೆ ಕಾರಣ ಏನಾದ್ರೂ ಇದೆಯಾ, ಇದೆಲ್ಲವೂ ತನಿಖೆಯಿಂದಷ್ಟೇ ಬಯಲಾಗಬೇಕಿದೆ.ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದು ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು ಕೊಲೆ ಯಾವ ಕಾರಣಕ್ಕೆ ನಡೆದಿದೆ ಎಂದು ಇನ್ನಷ್ಟೇ ಮಾಹಿತಿ ತಿಳಿಯಬೇಕಾಗಿದೆ.


