Monday, July 20, 2026
Homeಜಿಲ್ಲೆಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೊರ್ವ ಆರೋಪಿಯ ಬಂಧನ..!

ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೊರ್ವ ಆರೋಪಿಯ ಬಂಧನ..!

ಮಂಗಳೂರು ; ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

01-05-2025 ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪದ ಹಿನ್ನೆಲೆ ಬಂಧಿಸಿದ್ದಾರೆ.

ಬಂಧಿತನನ್ನು ಅಬ್ದುಲ್ ರಜಾಕ್ (59), : ಬದ್ರಿಯಾ ಜುಮ್ಮಾ ಮಸೀದಿ ಬಳಿ, ಶಾಂತಿಗುಡ್ಡೆ, ಬಜಪೆ ನಿವಾಸಿ ಎಂದು ತಿಳಿದಿದೆ.

ಈತನು ಸುಹಾಸ್ ಶೆಟ್ಟಿ ಹತ್ಯೆಪ್ರಕರಣದಲ್ಲಿನ ಪ್ರಮುಖ ಆರೋಪಿಗಳ ಪೈಕಿ ತನ್ನ ಮಗ ಮೊಹಮ್ಮದ್ ಮುಜಾಂಮ್ಮಿಲ್ ಮತ್ತು ಮಗಳ ಗಂಡ ನೌಷದ್ ವಾಮಂಜೂರು @ ಚೊಟ್ಟೆ ನೌಷದ್ ಹಾಗೂ ಇತರ ಆರೋಪಿಗಳ ಜೊತೆ ಸೇರಿ ತನ್ನ ಮನೆಯಲ್ಲಿ ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಯು ತಲೆ ಮರೆಸಿಕೊಳ್ಳಲು ಸಹಕರಿಸಿರುತ್ತಾನೆ ಎಂದು ತಿಳಿದಿದೆ.

ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular