ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನುNIA ಗೆ ವಹಿಸುವಂತೆ ಒತ್ತಾಯಿಸಿ ವಿ,ಹ್,ಪಿ ಯಿಂದ ಬಜ್ಪೆ ಚಲೋ :ಪೊಲೀಸರಿಂದ ಆಯೋಜಕರು-ಭಾಷಣಕಾರರ ವಿರುದ್ಧ ಪ್ರಕರಣ ದಾಖಲು ..!
ಮಂಗಳೂರು : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಸದಸ್ಯರು ಬಜ್ಪೆಯ ಶಾರದಾ ಮಂಟಪದ ಬಳಿ “ಬಜ್ಪೆ ಚಲೋ” ಎಂಬ ಶೀರ್ಷಿಕೆಯಡಿಯಲ್ಲಿ ಸುಹಾಸ್ ಶೆಟ್ಟಿ ಅವರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದು ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಲಾಯಿತು ಎಂದು ಆರೋಪದ ಹಿನ್ನೆಲೆ ಬಜ್ಪೆ ಚಲೋ ಆಯೋಜಕರು, ಭಾಷಣಕಾರನ ವಿರುದ್ಧ ಬಜ್ಪೆ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ .
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು ನಗರ ಪೊಲೀಸ್ ಆಯುಕ್ತರು ಕೂಡ ಕಾಂಗ್ರೆಸ್ ಮುಖಂಡರ ತಾಳಕ್ಕೆ ತಕ್ಕ ಕುಣಿಯುತ್ತಿದ್ದರೆಂದು ಆರೋಪಿಸಿದ್ದಾರೆ.
ಮಧ್ಯಾಹ್ನ 3:೦೦ ರಿಂದ ಸಂಜೆ 5:೦೦ ರವರೆಗೆ ನಡೆದ ಕಾರ್ಯಕ್ರಮದಲ್ಲಿ ಸುಮಾರು 3,೦೦೦ ಜನರು ಭಾಗವಹಿಸಿದ್ದರು. ಪ್ರತಿಭಟನಾಕಾರರು ಬಜ್ಪೆ ಬಸ್ ನಿಲ್ದಾಣ ಮತ್ತು ಸುತ್ತಮುತ್ತ ಕಾನೂನುಬಾಹಿರವಾಗಿ ಜಮಾಯಿಸಿ, ರಾಜ್ಯ ಹೆದ್ದಾರಿ ಸಂಖ್ಯೆ ೬೭ ರ ಕೆಲವು ಭಾಗಗಳನ್ನು ಹಾಗೂ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ಆಕ್ರಮಿಸಿಕೊಂಡು, ವಾಹನ ಸಂಚಾರ ಮತ್ತು ಸಾರ್ವಜನಿಕ ಪ್ರವೇಶಕ್ಕೆ ಅಡ್ಡಿಪಡಿಸಿದ್ದಾರೆಂದು ದಾಖಲಾಗಿದೆ.
ಪ್ರತಿಭಟನೆಯ ಸಮಯದಲ್ಲಿ, ಭಾಷಣಕಾರರಲ್ಲಿ ಒಬ್ಬರು ಸುಹಾಸ್ ಶೆಟ್ಟಿ ಪ್ರಕರಣವನ್ನು ಉಲ್ಲೇಖಿಸಿ ಕೋಮು ಸೌಹಾರ್ದತೆಯನ್ನು ಕೆರಳಿಸುವ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದು ಇದು ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣಕ್ಕೆ ಸೃಷ್ಟಿ ಮಾಡಿದೆ ಎಂದು ಉಲ್ಲೇಖಿಸಿದೆ.
ಘಟನೆಯ ಆಧಾರದ ಮೇಲೆ, ಬಜ್ಪೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 90/2025 ರಲ್ಲಿ ಈ ಕೆಳಗಿನ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು
ಬಿಎನ್ಎಸ್ – ಸೆಕ್ಷನ್ 189(2), 191(2), 285, 192, 351(2), 351(3), 190 ಕರ್ನಾಟಕ ಪೊಲೀಸ್ ಕಾಯ್ದೆ, 1963 – ಸೆಕ್ಷನ್ 107, 109, ಈ ಕಾರ್ಯಕ್ರಮದ ಆಯೋಜಕರು ಮತ್ತು ಭಾಷಣಕಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ .


