Tuesday, October 21, 2025
Flats for sale
Homeಜಿಲ್ಲೆಮಂಗಳೂರು : ಸೆ.28 ರಂದು ರಾಮಕ್ಷತ್ರಿಯ ಸೇವಾ ಸಂಘ(ರಿ) ಮಂಗಳೂರು ವತಿಯಿಂದ ಸಮಾಜದಲ್ಲಿ ಸಾಧನೆ ಮಾಡಿದಂತಹ...

ಮಂಗಳೂರು : ಸೆ.28 ರಂದು ರಾಮಕ್ಷತ್ರಿಯ ಸೇವಾ ಸಂಘ(ರಿ) ಮಂಗಳೂರು ವತಿಯಿಂದ ಸಮಾಜದಲ್ಲಿ ಸಾಧನೆ ಮಾಡಿದಂತಹ ಸಾಧಕರಿಗೆ ಅಭಿನಂದನಾ ಸಮಾರಂಭ…!

ಮಂಗಳೂರು : ರಾಮಕ್ಷತ್ರಿಯ ಸೇವಾ ಸಂಘ (ರಿ.), ಮಂಗಳೂರು ವತಿಯಿಂದ “ಅಭಿನಂದನಾ ಸಮಾರಂಭ” ಕಾರ್ಯಕ್ರಮವನ್ನು ಸೆಪ್ಟೆಂಬರ್ 28ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಮೋರ್ಗನ್ಸ್ ಗೇಟ್‌ನ ಪಾಲೆಮಾರ್ ಗಾರ್ಡನ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ತಿಳಿಸಿದರು.

ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 75 ವರ್ಷಗಳ ಪರಂಪರೆಯ ಈ ಸಂಘವು ಸಮಾಜಮುಖಿ ಚಟುವಟಿಕೆಗಳ ಮೂಲಕ ವೈದ್ಯಕೀಯ ಸಹಾಯ, ವಿದ್ಯಾಧನ, ರಕ್ತದಾನ, ಪ್ರತಿಭಾ ಪುರಸ್ಕಾರ ಮತ್ತು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು. ಈ ಬಾರಿ ಸಮಾಜ ಮತ್ತು ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗೌರವಿಸುವ ಉದ್ದೇಶದಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸನ್ಮಾನಿತರು:
ಡಾ. ಹೆಚ್. ಪ್ರಭಾಕರ – ಹೃದ್ರೋಗ ತಜ್ಞರು, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ.
ಡಾ. ಸದಾನಂದ ಪೂಜಾರಿ – ಮೂತ್ರರೋಗ ತಜ್ಞರು, ಸರ್ಕಾರಿ ವೆಸ್ಲಾಕ್ ಆಸ್ಪತ್ರೆ.
ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು – ಡಾ. ಬಿ.ಸಿ.ರಾಯ್ ರಾಷ್ಟ್ರೀಯ ಸಮುದಾಯ ಸೇವಾ ಪುರಸ್ಕೃತರು.
ಕು. ನಾಗಶ್ರೀ ಗಣೇಶ ಶೇರುಗಾರ್ – ಅಂತಾರಾಷ್ಟ್ರೀಯ ವೈಟ್ ಲಿಫ್ಟಿಂಗ್ ಮತ್ತು ಪವರ್ ಲಿಫ್ಟಿಂಗ್ ಕ್ರೀಡಾಪಟು.

ಸಮಾರಂಭದಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ದಿವ್ಯ ಉಪಸ್ಥಿತಿ ನೀಡಿ ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ನಿಟ್ಟೆ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಡಾ. ಶಾಂತರಾಮ ಶೆಟ್ಟಿ, ಶಾಸಕರು ಡಿ. ವೇದವ್ಯಾಸ ಕಾಮತ್ ಮತ್ತು ಉಮಾನಾಥ ಎ. ಕೋಟ್ಯಾನ್ ಪಾಲ್ಗೊಳ್ಳಲಿದ್ದಾರೆ ಎಂದರು.

ವಿಶೇಷ ಆಕರ್ಷಣೆಯಾಗಿ ಬೆಳಗ್ಗೆ 9ರಿಂದ 10ರವರೆಗೆ ಯಕ್ಷ ದಿಗ್ಗಜರಿಂದ “ಯಕ್ಷ ತೆಲಿಕೆ” ಹಾಸ್ಯ ರಸಧಾರೆ ಇರಲಿದೆ. ಡಾ. ಶಿವಾನಂದ ಬೇಕಲ್ ಅವರ “ಒಗಟಿನ ಮನೆ” ಕೃತಿ ಬಿಡುಗಡೆ ನಡೆಯಲಿದೆ ಎಂದು ಇದೇ ವೇಳೆ ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ರವೀಂದ್ರ ಕೆ., ಅಧ್ಯಕ್ಷ ಮುರಳಿ, ಕಾರ್ಯದರ್ಶಿ ರವೀಂದ್ರ, ಕೋಶಾಧಿಕಾರಿ ದಿನೇಶ್ ಕುಮಾರ್ ಬೇಕಲ್ ,ಅಜಿ್ಕುಕುಮಾ ಹಾಗೂ ಶಿವಪ್ರಸಾದ್ ರವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular