ಮಂಗಳೂರು : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಪೊಲೀಸ್ ಅಧಿಕಾರಿಗಳು ವಿಚಾರಣೆಗಾಗಿ ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಗೆ ಆಗಮಿಸಿದ್ದಾರೆ.
ಅಂದಿನ ಪಿಎಸ್‌ಐ ಯೋಗೇಶ್ ಅವರು ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಪ್ರಸ್ತುತ ಪೊಲೀಸ್ ಇನ್ಸ್‌ಪೆಕ್ಟರ್ ಆಗಿರುವ ಅವರು ಒಬ್ಬರೇ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಭಾಸ್ಕರ್ ರೈ ಹಾಗೂ ಸಿಐಡಿಯ ಅಂದಿನ ಡಿವೈಎಸ್‌ಪಿ ರುದ್ರಮುನಿ ಅವರೂ ವಿಚಾರಣೆ ಎದುರಿಸಲು ಆಗಮಿಸಿದ್ದಾರೆ.
ಸೌಜನ್ಯ ಪ್ರಕರಣದ ತನಿಖಾಧಿಕಾರಿಯಾಗಿದ್ದ ಭಾಸ್ಕರ್ ರೈ ಅವರ ವಿಚಾರಣೆಗೆ ವಿಶೇಷ ಮಹತ್ವವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ತನಿಖೆ ಹಾಗೂ ಇತರ ವಿಚಾರಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದೆಯೇ ಎಂಬುದು ಕುತೂಹಲ ಮೂಡಿಸಿದೆ.

