Monday, November 23, 2026
Homeಜಿಲ್ಲೆಮಂಗಳೂರು : ಸೌಜನ್ಯ ಪ್ರಕರಣದ ಮರುತನಿಖೆಗೆ ದಾಖಲೆಗಳ ಸಲ್ಲಿಕೆ ; ಎಸ್‌ಐಟಿ ತನಿಖೆ ಬಗ್ಗೆ ಮಟ್ಟಣ್ಣನವರ್...

ಮಂಗಳೂರು : ಸೌಜನ್ಯ ಪ್ರಕರಣದ ಮರುತನಿಖೆಗೆ ದಾಖಲೆಗಳ ಸಲ್ಲಿಕೆ ; ಎಸ್‌ಐಟಿ ತನಿಖೆ ಬಗ್ಗೆ ಮಟ್ಟಣ್ಣನವರ್ ವಿಶ್ವಾಸ..!

ಮಂಗಳೂರು : ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನ ಎಸ್‌ಐಟಿ ಕಚೇರಿಗೆ ಭೇಟಿ ನೀಡಿ ತಮ್ಮ ಬಳಿಯಿದ್ದ ಮಹತ್ವದ ದಾಖಲೆಗಳನ್ನು ತನಿಖಾಧಿಕಾರಿಗಳಿಗೆ ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿದ ಗಿರೀಶ್ ಮಟ್ಟಣ್ಣನವರ್, ಕಳೆದ 14 ವರ್ಷಗಳಿಂದ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಬಳಿ ಇದ್ದ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ತಿಳಿಸಿದ್ದೇವೆ ಎಂದು ಹೇಳಿದರು.

ತನಿಖಾಧಿಕಾರಿಗಳು ಪ್ರತಿಯೊಂದು ಸಣ್ಣ ಎಳೆಯನ್ನೂ ಬಿಡದೆ ತನಿಖೆ ನಡೆಸುತ್ತಿದ್ದಾರೆ. ಎಸ್‌ಐಟಿ ತನಿಖೆಯ ಬಗ್ಗೆ ನಮಗೆ ಸಂಪೂರ್ಣ ನಂಬಿಕೆ ಹಾಗೂ ಸಮಾಧಾನವಿದೆ. ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಕೇವಲ 90 ದಿನಗಳ ಕಾಲಾವಕಾಶದಲ್ಲಿ ಇಂತಹ ಪ್ರಕರಣದ ತನಿಖೆ ಪೂರ್ಣಗೊಳಿಸಲು ಸಾಧ್ಯವಿಲ್ಲ. ಅಗತ್ಯವಿದ್ದರೆ ತನಿಖೆಗೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಿ. ಇನ್ನೂ ಮೂರು ತಿಂಗಳ ಕಾಲಾವಕಾಶ ಪಡೆದರೂ ನಮ್ಮ ಯಾವುದೇ ಆಕ್ಷೇಪವಿಲ್ಲ ಎಂದು ಮಟ್ಟಣ್ಣನವರ್ ತಿಳಿಸಿದರು. ಮಂಗಳೂರಿನ ಎಸ್‌ಐಟಿ ಕಚೇರಿ ಬಳಿ ಗಿರೀಶ್ ಮಟ್ಟಣ್ಣನವರ್ ಈ ಹೇಳಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular