ಮಂಗಳೂರು : ಇತ್ತಿಚ್ಚಿನ ದಿನಗಳಲ್ಲಿ ವಂಚನೆಕೊರರರು ಒಂದಲ್ಲ ಒಂದು ಹೆಸರನ್ನು ಬಳಸಿ ಮೋಸಕ್ಕೆ ದೂಡುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಅದರಂತೆಯೇ ರಾಜೇಶ್ ಎಂಬವರು ಬಂಟ್ವಾಳ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಅನ್ವಯ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬುವರು ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ವಂಚಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಬಗೆಹರಿಸುವುದಾಗಿ ಹೇಳಿ ಹಣ ಪಡೆದಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರಾಜೇಶ್ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್ಬುಕ್ ಮೂಲಕ ಪರಿಚಯವಾಗಿದ್ದಾಳೆ. ಸೌಜನ್ಯ ಹೆಲ್ಪ್‌ಲೈನ್ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವು ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಬಗೆಹರಿಸಿದ್ದೇನೆ ಅಂತ ರಾಜೇಶ್ ಅವರಿಗೆ ನಂಬಿಸಿದ್ದಾಳೆ.ದೂರುದಾರ ರಾಜೇಶ್ ವೃತ್ತಿಯಲ್ಲಿ ಗಾಯಕರಾಗಿದ್ದು, ಅರವಿಂದ್ ವಿವೇಕ್ ಎಂಬ ಫೇಸ್ಬುಕ್ ಪೇಜ್ನಲ್ಲಿ ರಾಜೇಶ್ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು.
ಸೌಜನ್ಯ ಹೆಲ್ಪ್‌ಲೈನ್ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವು ನೆರವಾಗುತ್ತಿದ್ದೇನೆ. ಎಂದು ನಂಬಿಸಿದ್ದು ರಾಜೇಶ್ ಅವರು ಬಂಟ್ವಾಳ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾ ಪವಿತ್ರ ನಾಗರಾಜ್ಗೆ ತಿಳಿಸಿದ್ದಾರೆ. ಆಗ, ಸಂಧ್ಯಾ ಹೈಕೋರ್ಟ್ನಲ್ಲಿ ಕೇಸ್ ಬಗೆಹರಿಸುತ್ತೇನೆ, ಆದರೆ, ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ. ನಂತರ, ರಾಜೇಶ್ ಅವರಿಂದ ಸಂಧ್ಯಾ ಹಂತ ಹಂತವಾಗಿ 3.20 ಲಕ್ಷ ರೂ. ಪಡೆದಿದ್ದಾಳೆ.ಇದೀಗ ಪವಿತ್ರ ನಾಗರಾಜ್ ಎಂಬವಳ ನಿಜಬಣ್ಣ ಬಯಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


