ಮಂಗಳೂರು : ಪಣಂಬೂರಿನ ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ)ದಲ್ಲಿ ತುರ್ತು ಕ್ರಮವಾಗಿ, ಅರೇಬಿಯನ್ ಸಮುದ್ರದಲ್ಲಿ ಬೆಂಕಿ ಹೊತ್ತಿಕೊಂಡ ಸಿಂಗಾಪುರದ ಸರಕು ಸಾಗಣೆ ಹಡಗಿನಿಂದ ರಕ್ಷಿಸಲ್ಪಟ್ಟ 18 ಸಿಬ್ಬಂದಿಯನ್ನು ರಕ್ಷಿಸಿದ್ದುಅವರಲ್ಲಿ ಐವರು ಗಾಯಗೊಂಡಿದ್ದಾರೆ, ಅವರಲ್ಲಿ ಇಬ್ಬರು ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕೊಲಂಬೊದಿಂದ ಮುಂಬೈಗೆ ತೆರಳುತ್ತಿದ್ದ ಎಂವಿ ವಾನ್ ಹೈ 503 ಎಂಬ ಹಡಗು, ಜೂನ್ 9 ರ ಸೋಮವಾರದಂದು ಕೇರಳದ ಬೇಪೋರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ದೊಡ್ಡ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ ಭಾರತೀಯ ನೌಕಾಪಡೆಯ ಹಡಗು ಐಎನ್‌ಎಸ್ ಸೂರತ್ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿತು ಮತ್ತು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನವಮಂಗಳೂರು ಬಂದರಿಗೆ ಆಗಮಿಸಿದೆ.
ಹಡಗಿನಲ್ಲಿದ್ದ 22 ಸಿಬ್ಬಂದಿಗಳಲ್ಲಿ 18 ಜನರನ್ನು ರಕ್ಷಿಸಲಾಗಿದ್ದು, ನಾಲ್ವರು ಇನ್ನೂ ಪತ್ತೆಯಾಗಿಲ್ಲ. ರಕ್ಷಿಸಲ್ಪಟ್ಟವರಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ ಮತ್ತು ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅವರು ಬಂದ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡಲು ಬಂದರಿನಲ್ಲಿ ವ್ಯವಸ್ಥೆ ಮಾಡಲಾಗಿದೆ.
ರಕ್ಷಿಸಲ್ಪಟ್ಟ ಸಿಬ್ಬಂದಿಯಲ್ಲಿ ನಾಲ್ಕು ದೇಶಗಳ ಪ್ರಜೆಗಳು ಸೇರಿದ್ದಾರೆ: ಚೀನಾದಿಂದ 9,ತೈವಾನ್‌ನಿಂದ 4 ,ಮ್ಯಾನ್ಮಾರ್‌ನಿಂದ 4,ಇಂಡೋನೇಷ್ಯಾದಿಂದ 2
ಬಂದರು ಅಧಿಕಾರಿಗಳು, ಜಿಲ್ಲಾಡಳಿತ, ಕೋಸ್ಟ್ ಗಾರ್ಡ್, ವೈದ್ಯಕೀಯ ತಂಡಗಳು ಮತ್ತು ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಿದೆ.ಹಡಗಿನಲ್ಲಿ ಹೊತ್ತಿಕೊಂಡಿರುವ ಬೆಂಕಿಯನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಶಿಪ್ ICGS ಸಚೇತ್ ಮತ್ತು ICGS ಸಮುದ್ರ ಪ್ರೆಹರಿ ಜಂಟಿಯಾಗಿ ನಂದಿಸುವ ಕಾರ್ಯದಲ್ಲಿ ತೊಡಗಿವೆ ಎಂಬ ಮಾಹಿತಿ ದೊರೆತಿದೆ.