Monday, July 14, 2025
Flats for sale
Homeಜಿಲ್ಲೆಮಂಗಳೂರು : 10 ವರ್ಷಗಳ ಹಿಂದೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬಿಹಾರ ಮೂಲದ ಆರೋಪಿಯ...

ಮಂಗಳೂರು : 10 ವರ್ಷಗಳ ಹಿಂದೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬಿಹಾರ ಮೂಲದ ಆರೋಪಿಯ ಬಂಧನ..!

ಮಂಗಳೂರು : 10 ವರ್ಷಗಳ ಹಿಂದೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬಿಹಾರ ಮೂಲದ ಆರೋಪಿಯನ್ನು ದಕ್ಷಿಣ ಕನ್ನಡ ‌ಜಿಲ್ಲೆಯ‌ ಬಂಟ್ವಾಳದ ವಿಟ್ಲ ಠಾಣಾ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಬಿಹಾರ ರಾಜ್ಯದ, ಪಾಟ್ನಾ ನಿವಾಸಿ ಬಬ್ಲೂ ಕುಮಾರ್ ಬಂಧಿತ ಆರೋಪಿ. 2015 ಅಕ್ಟೋಬರ್ 4 ರಂದು ರಾತ್ರಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ, ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಿಂದ ಜಾಮೀನು ಪಡೆದ ಪ್ರಕರಣದ ಆರೋಪಿ ಬಬ್ಲೂ ಕುಮಾರ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಆತನನ್ನು ವಿಟ್ಲ ಠಾಣಾ ಪೊಲೀಸರು, ಬಿಹಾರದ ಪಾಟ್ನಾ ಜಿಲ್ಲೆಯ ಬೀಟಾ ಎಂಬಲ್ಲಿಂದ‌, ಸ್ಥಳಿಯ ಪೊಲೀಸರ ಸಹಕಾರದಲ್ಲಿ ವಶಕ್ಕೆ ಪಡೆದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular