Sunday, December 14, 2025
Flats for sale
Homeಜಿಲ್ಲೆಮಂಗಳೂರು : 3 ಸಾವಿರ ಲಂಚ ಸ್ವೀಕಾರಿಸುತ್ತಿದ್ದಾಗ ಲೋಕಾಯುಕ್ತ ದಾಳಿ,ಪೊಲೀಸ್ ನಿರೀಕ್ಷಕ, ಠಾಣೆ ಸಿಬ್ಬಂದಿ ವಶಕ್ಕೆ..!

ಮಂಗಳೂರು : 3 ಸಾವಿರ ಲಂಚ ಸ್ವೀಕಾರಿಸುತ್ತಿದ್ದಾಗ ಲೋಕಾಯುಕ್ತ ದಾಳಿ,ಪೊಲೀಸ್ ನಿರೀಕ್ಷಕ, ಠಾಣೆ ಸಿಬ್ಬಂದಿ ವಶಕ್ಕೆ..!

ಮಂಗಳೂರು : ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ಕೆ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಇಂದು ನಡೆದಿದೆ.

ಓರ್ವ ವ್ಯಕ್ತಿ ಸ್ಕೂಟರ್ ವೊಂದನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆಗೊಳಿಸಲು ಮಾನ್ಯ ನ್ಯಾಯಾಲಯದಿಂದ ಆದೇಶವಾಗಿದ್ದು, ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ರವರನ್ನು ಭೇಟಿ ಮಾಡಿದಾಗ ರೂ. 5000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಸ್ಕೂಟರ್ ನ್ನು ಬಿಡುಗಡೆಗೊಳಿಸಲು ರೂ. 3 ಸಾವಿರ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ . ಪೊಲೀಸರು ಸದರಿ ಅಧಿಕಾರಿ ಇನ್ಸ್ಪೆಕ್ಟರ್ ಮಹಮ್ಮದ್ ಶರೀಫ್ ಮತ್ತು ಸಿಬ್ಬಂದಿ ಪಿಸಿ ಪ್ರವೀಣ್ ನಾಯ್ಕ್ ನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ರವರು ಠಾಣಾ ಬರಹಗಾರರಾದ ನಾಗರತ್ನ ರವರನ್ನು ಭೇಟಿ ಮಾಡಲು ತಿಳಿಸಿದ್ದರೆಂದೂ, ನಾಗರತ್ನರವರು ಅವಾಚ್ಯ ಶಬ್ದಗಳಿಂದ ಬೈದು ರೂ 3000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗುತ್ತಿದೆ. ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ಸ್ಕೂಟರ್ ಮಾಲಕ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣಿಗೆ ದೂರು ನೀಡಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣಿಯಲ್ಲಿ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ಮತ್ತು ಠಾಣಾ ಬರಹಗಾರರಾದ ನಾಗರತ್ನರವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ ಇನ್ನೂ ಠಾಣಾ ಬರಹಗಾರ ನಾಗರತ್ನ ಮೇಲೆ ಕೂಡ ಪ್ರಕರಣ ದಾಖಲಾಗಿದೆ.

ಕರ್ನಾಟಕ ಲೋಕಾಯುಕ್ತ, ಮಂಗಳೂರು ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಚಂದ್ರಶೇಖರ್ ಕೆ.ಎನ್ ರವರು ಮತ್ತು ಉಡುಪಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಂಜುನಾಥ ಹಾಗೂ ಇನ್ನಿತರರು ಕಾರ್ಯಾಚರಣೆ ವೇಳೆವಿದ್ದಾರೆಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular